ರಾಜ್ಯ

ಬೆಂಗಳೂರಿನಲ್ಲಿ ರೌಡಿಶೀಟರ್‌ ಅಟ್ಟಹಾಸ, ಸಿಕ್ಕ ಸಿಕ್ಕವರಿಗೆ ಚೂರಿ ಇರಿತ;ಕಂಠಪೂರ್ತಿ ಕುಡಿದವನಿಂದ ದಾಂಧಲೆ,ಬೆಚ್ಚಿ ಬಿದ್ದ ಜನತೆ

ನ್ಯೂಸ್‌ ನಾಟೌಟ್‌ : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೆಚ್ಚಿ ಬೀಳುವ ಘಟನೆ ಬಗ್ಗೆ ವರದಿಯಾಗಿದೆ.ವ್ಯಕ್ತಿಯೋರ್ವ ಕಂಠ ಪೂರ್ತಿ ಕುಡಿದು ಸಿಕ್ಕ ಸಿಕ್ಕವರಿಗೆ ಚಾಕುವಿನಿಂದ ಇರಿದ ಘಟನೆ ನಡೆದಿದೆ.

ಇಂದಿರಾ ನಗರ ಎಂಬಲ್ಲಿ ಶನಿವಾರ ರಾತ್ರಿಯಿಂದ ಐದು ಗಂಟೆಗಳಲ್ಲಿ ನಾಲ್ವರ ಮೇಲೆ ದಾಳಿ ನಡೆಸಿದ್ದಲ್ಲದೇ ಹಲ್ಲೆಗೊಳಗಾಗಿದ್ದರು.ಅದರಲ್ಲಿ ಇಬ್ಬರು ಇಬ್ಬರು ಪಾನಿ ಪುರಿ ಮಾರಾಟಗಾರರಾಗಿದ್ದರೆ,ಉಳಿದ ಇಬ್ಬರು ಲಿಫ್ಟ್ ನೀಡಲು ನಿರಾಕರಿಸಿದ ಹಿನ್ನೆಲೆ ದಾಳಿಗೊಳಗಾಗಿದ್ದಾರೆ. ನಾಲ್ವರೂ ಇಂದಿರಾನಗರ ಪೊಲೀಸರಿಗೆ ದೂರು ನೀಡಿದ್ದು,ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿದಿದೆ.

ಆರೋಪಿಗಳ ವಿರುದ್ಧ ಪೊಲೀಸರು ಮೂರು ಕೊಲೆ ಯತ್ನ ಪ್ರಕರಣಗಳು ಮತ್ತು ದರೋಡೆ ಪ್ರಕರಣ ದಾಖಲಿಸಿದ್ದಾರೆ. ನಾಲ್ವರ ಮೇಲೆ ದಾಳಿ ನಡೆಸಿರುವ ಆರೋಪಿಯನ್ನು ಭಿನ್ನಮಂಗಲ ನಿವಾಸಿ ಕದಂಬ ಗುರುತು ಹಿಡಿಯಲಾಗಿದೆ.ಈತ ಹಲ್ಲೆ, ಸುಲಿಗೆ ಕೃತ್ಯಗಳಲ್ಲಿ ಕುಖ್ಯಾತಿ ಗಳಿಸಿದ್ದು, 2024ರಲ್ಲಿ ಇಂದಿರಾನಗರ ಠಾಣೆಯಲ್ಲಿ ಕದಂಬ ವಿರುದ್ಧ ರೌಡಿಶೀಟ್‌ ತೆರೆಯಲಾಗಿತ್ತು. ಜೈಲೂಟ ಮುಗಿಸಿ ಹೊರಗಡೆಯಿರುವ ಕದಂಬನ ಸರಣಿ ಕೃತ್ಯಗಳು ಆತಂಕಕ್ಕೆ ಎಡೆ ಮಾಡಿಕೊಟ್ಟಿವೆ.

ಕೃತ್ಯವೆಸಗಿದ್ದೇಕೆ?

ಪ್ರಸ್ತುತ ದಾಳಿಗೊಳಗಾದ ನಾಲ್ವರನ್ನು ಇಂದಿರಾನಗರದ ಮೋಟಪ್ಪನಪಾಳ್ಯದ ನಿವಾಸಿ ಮತ್ತು ಪ್ರಯಾಗರಾಜ್‌ನ 24 ವರ್ಷದ ದೀಪಕ್ ಕುಮಾರ್ ವರ್ಮಾ, ಇಂದಿರಾನಗರದ ಅಪ್ಪಾ ರೆಡ್ಡಿ ಪಾಳ್ಯದ ನಿವಾಸಿ 44 ವರ್ಷದ ಎಂ. ತಮ್ಮಯ್ಯ, ಮಾಗಡಿ ರಸ್ತೆಯ ಚೋಳರಪಾಳ್ಯದ 24 ವರ್ಷದ ಎ. ಆದಿಲ್ ಮತ್ತು ಇಂದಿರಾನಗರದ 10 ನೇ ‘ಎ’ ಕ್ರಾಸ್ ನಿವಾಸಿ 19 ವರ್ಷದ ಪಿ. ಜಸವಂತ್ ಎಂದು ಗುರುತಿಸಲಾಗಿದೆ. ವರ್ಮಾ ಮತ್ತು ತಮ್ಮಯ್ಯ ಪಾನಿ ಪುರಿ ಮಾರಾಟಗಾರರಾಗಿದ್ದಾರೆ.ಇಂದಿರಾನಗರದಲ್ಲಿ ತನ್ನ ಪ್ರಾಬಲ್ಯ ಸಾಧಿಸಲು ಸ್ಥಳೀಯರು ಮತ್ತು ಅಂಗಡಿ ಮಾರಾಟಗಾರರನ್ನು ಬೆದರಿಸುವಲ್ಲಿ ತೊಡಗಿದ್ದ ಎಂದು ತಿಳಿದುಬಂದಿದೆ.

Related posts

ಶರಣಾಗತಿಗೂ ಮುನ್ನ ಹಲವು ಬೇಡಿಕೆಗಳನ್ನು ಮುಂದಿಟ್ಟ ನಕ್ಸಲರು..! 6 ಮಂದಿ ನಕ್ಸಲರಿಂದ ಕರ್ನಾಟಕ ಸರ್ಕಾರಕ್ಕೆ ಪತ್ರ..!

ಬಾಲಕನ ಕೆನ್ನೆಯ ಗಾಯಕ್ಕೆ ಹೊಲಿಗೆ ಬದಲು ಫೆವಿಕ್ವಿಕ್ ಹಾಕಿದ ನರ್ಸ್ ಅಮಾನತ್ತು..! ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದ್ದೇನು..?

ಕಾರ್ಕಳ: ರಾತ್ರೋರಾತ್ರಿ ‘ಪರಶುರಾಮ ಥೀಂ ಪಾರ್ಕ್’ ಗೆ ಹೋಗುವ ರಸ್ತೆಗೆ ಮಣ್ಣು ಹಾಕಿದ ಕಾಂಗ್ರೆಸ್ ..! ಬಿಜೆಪಿಯಿಂದ ಗಂಭೀರ ಆರೋಪ, ಏನಿದು ಘಟನೆ..?