ಕರಾವಳಿರಾಜಕೀಯ

ಉಡುಪಿಯಲ್ಲಿ ಕಾಂಗ್ರೆಸ್‌ಗೆ ಬಂಡಾಯದ ಬಿಸಿ

ಕೃಷ್ಣಮೂರ್ತಿ ಆಚಾರ್ಯ ಪಕ್ಷೇತರ ಸ್ಪರ್ಧೆ

ನ್ಯೂಸ್‌ ನಾಟೌಟ್‌: ಕಾಂಗ್ರೆಸ್ ಎರಡನೇ ಪಟ್ಟಿಯಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದಿಂದ ಯುವ ಉದ್ಯಮಿ ಪ್ರಸಾದ್‌ ಕಾಂಚನ್‌ ಅವರನ್ನು ಅಭ್ಯರ್ಥಿ ಎಂದು ಘೋಷಿಸಿದೆ. ಇದರ ಬೆನ್ನಲ್ಲೇ ಕೆಲವು ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರಲ್ಲಿ ಅಸಮಾಧಾನ ಉಂಟಾಗಿದ್ದು, ಪಕ್ಷದ ಈ ನಿರ್ಧಾರವನ್ನು ವಿರೋಧಿಸಿ ಪ್ರಬಲ ಟಿಕೆಟ್‌ ಆಕಾಂಕ್ಷಿಯಾಗಿದ್ದ ಕೃಷ್ಣಮೂರ್ತಿ ಆಚಾರ್ಯ ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಉಡುಪಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಟಿಕೆಟ್‌ ಬಯಸಿ ಎಂಟು ಮಂದಿ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದರು. ಜಿಲ್ಲಾಧ್ಯಕ್ಷ ಅಶೋಕ್ ಕೊಡವೂರು, ಬ್ಲಾಕ್ ಅಧ್ಯಕ್ಷ ರಮೇಶ್ ಕಾಂಚನ್, ಅಮೃತ್ ಶೆಣೈ, ಕೃಷ್ಣಮೂರ್ತಿ ಆಚಾರ್ಯ ಸಹಿತ ಎಂಟು ಮಂದಿ ಟಿಕೆಟ್ ಪಡೆಯಲು ಕಸರತ್ತು ನಡೆಸಿದ್ದರು.

ಪ್ರಸಾದ್‌ ಕಾಂಚನ್‌ಗೆ ಅವಕಾಶ ಲಭಿಸುತ್ತಿದ್ದಂತೆ ಪ್ರಬಲ ಆಕಾಂಕ್ಷಿ ಕೃಷ್ಣಮೂರ್ತಿ ಆಚಾರ್ಯ ಗುರುವಾರ ಸಂಜೆ ಬೆಂಬಲಿಗರ ಸಭೆ ನಡೆಸಿ ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅಲ್ಲದೆ, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಅಭಿಮಾನಿಗಳ ಸಭೆಯಲ್ಲಿ ಘೋಷಿಸಿದ್ದಾರೆ. ಅಲ್ಲದೆ ಮೊನ್ನೆ ಬಂದವರಿಗೆ ಟಿಕೆಟ್‌ ನೀಡಿ ನನಗೆ ಅನ್ಯಾಯ ಮಾಡಲಾಗಿದೆ. ಅಭಿಮಾನಿಗಳ ಸಹಕಾರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ. ಅಭ್ಯರ್ಥಿ ಆಯ್ಕೆ ಕಸರತ್ತು ನಡೆಸುತ್ತಿರುವ ಕಾಂಗ್ರೆಸ್‌ಗೆ ಇದೀಗ ಬಂಡಾಯದ ಬಿಸಿ ತಟ್ಟಿದೆ.

Related posts

ಕೇಂದ್ರದ ಪಟ್ಟಿ ಬಿಡುಗಡೆಗೂ ಒಂದು ದಿನ ಮೊದಲೇ ಪುತ್ತೂರು, ಸುಳ್ಯ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ್ದ ‘ನ್ಯೂಸ್ ನಾಟೌಟ್’

ಬಂಟ್ವಾಳ:ರಾತ್ರಿ ಊಟ ಮಾಡಿ ಮಲಗಿದ್ದ ಯುವತಿ ಬೆಳಗ್ಗೆ ಎದ್ದೇಳಲೇ ಇಲ್ಲ,ಯುವತಿಗೆ ಆಗಿದ್ದೇನು?

ಬಿಜೆಪಿ ಸುಳ್ಯ ವಿಧಾನ ಸಭಾ ಕ್ಷೇತ್ರದ ಒಬಿಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಅಶೋಕ ಅಡ್ಕಾರ್ ನೇಮಕ