ನ್ಯೂಸ್ ನಾಟೌಟ್: ಸಂಬಂಧಿಯ ಮದುವೆ ಸಮಾರಂಭದಲ್ಲಿ ವೇದಿಕೆಯಲ್ಲಿ ಖುಷಿಯಿಂದ ಕುಣಿಯುತ್ತಿದ್ದ ಯುವತಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ನಡೆದಿದೆ.
ರೆಸಾರ್ಟ್ವೊಂದರಲ್ಲಿ ಮದುವೆ ಸಮಾರಂಭ ಆಯೋಜಿಸಲಾಗಿತ್ತು. ಯುವತಿಯೊಬ್ಬರು ಖುಷಿ ಖುಷಿಯಿಂದ ವೇದಿಕೆ ಮೇಲೆ ನೃತ್ಯ ಮಾಡುತ್ತಿದ್ದಳು, ಏಕಾಏಕಿ ಕುಸಿದುಬಿದ್ದಿದ್ದಾಳೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಸಮಾರಂಭದಲ್ಲಿ ಹಾಜರಿದ್ದ ವೈದ್ಯರು ಕೂಡಲೇ ಸಿಪಿಆರ್ ನೀಡಿದ್ದಾರೆ, ಆದರೆ ಯಾವುದೇ ಪ್ರತಿಕ್ರಿಯೆ ಬರಲಿಲ್ಲ, ಬಳಿಕ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ವೈದ್ಯರು ಅವರು ಮೃತಪಟ್ಟಿದ್ದಾರೆಂದು ಘೋಷಿಸಿದ್ದಾರೆ. ಆಕೆ ಎಂಬಿಎ ಪದವೀಧರೆಯಾಗಿದ್ದು, ಇಂದೋರ್ ನಲ್ಲಿ ಹೆತ್ತವರೊಂದಿಗೆ ವಾಸಿಸುತ್ತಿದ್ದಳು. ಆಕೆಯ ಕಿರಿಯ ಸಹೋದರಿ ತನ್ನ 12ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಳು ಎನ್ನಲಾಗಿದೆ.