ಕರಾವಳಿಕ್ರೈಂಪುತ್ತೂರು

ಪಾಣೆಮಂಗಳೂರು: ನೇತ್ರಾವತಿ ನದಿಗೆ ಹಾರಲೆತ್ನಿಸಿದ ಯುವಕ..!ರಕ್ಷಿಸಿ ಪೊಲೀಸರಿಗೊಪ್ಪಿಸಿದ ಸ್ಥಳೀಯರು

170

ನ್ಯೂಸ್ ನಾಟೌಟ್: ಪದವೀಧರನಾಗಿಯೂ ನಿರುದ್ಯೋಗಿಯಾಗಿರುವ ಯುವಕನೋರ್ವ ಮನನೊಂದು ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ(ಫೆ.19) ಪಾಣೆಮಂಗಳೂರಿನ ನೇತ್ರಾವತಿ ಸೇತುವೆ ಬಳಿ ನಡೆದಿದೆ.

ಈ ವೇಳೆ ಸ್ಥಳೀಯ ಯುವಕರ ತಂಡ ಆತನನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ವರದಿ ತಿಳಿಸಿದೆ.ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಪುತ್ತೂರಿನ ನಿಶ್ಚಿತ್ (25) ಎಂದು ಗುರುತಿಸಲಾಗಿದೆ.

ಈತ ಎಂ ಎಸ್ ಡಬ್ಲ್ಯು ಪದವೀಧರನಾಗಿದ್ದು, ಸೂಕ್ತ ಉದ್ಯೋಗ ದೊರೆಯದ ಹಿನ್ನಲೆಯಲ್ಲಿ ಮಾನಸಿಕ ಖಿನ್ನತೆಗೊಳಗಾಗಿ ಈ ಕೃತ್ಯಕ್ಕೆ ಮುಂದಾಗಿದ್ದಾನೆ ಎನ್ನಲಾಗಿದೆ.ದ್ವಿಚಕ್ರ ವಾಹನದಲ್ಲಿ ಬಂದಿದ್ದ ಈತ ವಾಹನ ನಿಲ್ಲಿಸಿ ನದಿಗೆ ಹಾರುವ ಸಿದ್ಧತೆಯಲ್ಲಿದ್ದಾಗ ಗಮನಿಸಿದ ಸ್ಥಳೀಯ ನಿವಾಸಿಗಳು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ ಎನ್ನಲಾಗಿದೆ.ಯುವಕನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

See also  ಮಂಟಪದಿಂದ ವರನನ್ನೇ ಅಪಹರಿಸಿದ ನೃತ್ಯಗಾರ್ತಿಯರ ಗ್ಯಾಂಗ್..! 7 ಗಂಟೆಗಳಲ್ಲಿ ವರನನ್ನು ಪತ್ತೆಹಚ್ಚಿದ ಪೊಲೀಸರು..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget