ಕ್ರೈಂಬೆಂಗಳೂರು

10 ವರ್ಷದ ವಿಶೇಷ ಚೇತನ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಿನ್ಸಿಪಾಲ್..! ಬೆಂಗಳೂರಲ್ಲಿ ನಡೆದ ಅಮಾನವೀಯ ಕೃತ್ಯ ಬಯಲಾದದ್ದೇ ರೋಚಕ!

ನ್ಯೂಸ್ ನಾಟೌಟ್ : 10 ವರ್ಷದ ಡಿಸ್ಲೆಕ್ಸಿಕ್ (ನಿಧಾನಗತಿಯಲ್ಲಿ ಮಾತನಾಡುವುದು, ತಡವಾಗಿ ಪ್ರತಿಕ್ರಿಯಿಸುವುದು) ನಿಂದ ಬಳಲುತ್ತಿದ್ದ ಬಾಲಕಿಯ ಮೇಲೆ ನಡೆಸಿದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಶಾಲೆಯ ಪ್ರಾಂಶುಪಾಲರನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ.

65 ವರ್ಷದ ಆರೋಪಿ ಶಾಲೆಯ ಮಾಲೀಕನೂ ಆಗಿದ್ದು, ಗುರುವಾರ ಬೆಳಗ್ಗೆ 11.30ರ ಸುಮಾರಿಗೆ ಶಾಲೆಯ ಖಾಲಿ ತರಗತಿಯೊಳಗೆ ಈ ಘಟನೆ ನಡೆದಿದೆ. ವರ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಬಾಲಕಿಗೆ ಆಮೀಷವೊಡ್ಡಿದ ಪ್ರಾಂಶುಪಾಲ ಆಕೆಯನ್ನು ತರಗತಿಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ ಎನ್ನಲಾಗಿದೆ.

ಮನೆಗೆ ಹಿಂದಿರುಗಿದ ನಂತರ, ಸಂತ್ರಸ್ತೆ ತನ್ನ ತಾಯಿಗೆ ತನ್ನ ನೋವಿನ ಬಗ್ಗೆ ವಿವರಿಸಿದ್ದಾಳೆ. ನಂತರ ಆಕೆಯನ್ನು ವೈದ್ಯಕೀಯ ಪರೀಕ್ಷೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆಗಸ್ಟ್ 3 ರಂದು ಎಂದಿನಂತೆ ವಿದ್ಯಾರ್ಥಿನಿ ಶಾಲೆಗೆ ತೆರಳಿದ್ದಳು. ಶಾಲೆಗೆ ಬಂದ ವಿದ್ಯಾರ್ಥಿನಿಯನ್ನು ಕಂಡ ಕಾಮುಕ ಪ್ರಾಂಶುಪಾಲ ಖಾಲಿ ರೂಮಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ.

ಮನೆಗೆ ಬಂದ ಮಗಳು ನೋವು ತಾಳದೆ ಒದ್ದಾಡಿದನ್ನು ಕಂಡ ಪೋಷಕರು ಮಗಳ ಬಳಿ ವಿಚಾರಿಸಿ ತಕ್ಷಣ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಈ ವೇಳೆ ಕೃತ್ಯ ಬಯಲಾಗಿದೆ. ವರ್ತೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಸಂತ್ರಸ್ತೆಯ ತಾಯಿ ನೀಡಿದ ದೂರಿನ ಆಧಾರದ ಮೇಲೆ, ಘಟನೆಗೆ ಸಂಬಂಧಿಸಿದಂತೆ ಲೈಂಗಿಕ ಅಪರಾಧಗಳ ವಿರುದ್ಧ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ) ಮತ್ತು ಭಾರತೀಯ ದಂಡ ಸಂಹಿತೆಯ 376 ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಂತ್ರಸ್ತೆಯ ತಾಯಿ ಗೃಹಿಣಿಯಾಗಿದ್ದು, ಆಕೆಯ ತಂದೆ ಆರೋಗ್ಯ ಸಂಬಂಧಿ ಸಮಸ್ಯೆಗಳಿಂದ 2020 ರಲ್ಲಿ ನಿಧನರಾದರು ಎಂದು ಪೊಲೀಸರು ತಿಳಿಸಿದ್ದಾರೆ.

Related posts

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ 21ನೇ ಆರೋಪಿ ಅರೆಸ್ಟ್..! ಪ್ರಮುಖ ಕೊಲೆ ಆರೋಪಿಯನ್ನು ಚೆನ್ನೈಗೆ ಕಳುಹಿಸಿ ಪರಾರಿಯಾಗಲು ನೆರವು ನೀಡಿದ್ದವನ ಬಂಧನ..!

ಭಯೋತ್ಪಾದಕರ ಎನ್ ಕೌಂಟರ್ ವೇಳೆ ಸೈನಿಕನ ರಕ್ಷಣೆಗಾಗಿ ಪ್ರಾಣ ತೆತ್ತ ಸೇನಾ ಶ್ವಾನ! ಪೊಲೀಸ್ ಮಾಹಾನಿರ್ದೇಶಕ ಹೇಳಿದ್ದೇನು?

ಮೂಕ ಹೆಂಡತಿಗಾಗಿ ದೇವಿಯ ಮುಂದೆ ನಾಲಿಗೆ ಕತ್ತರಿಸಿಕೊಂಡ ವ್ಯಕ್ತಿ..! ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು..?