Latestಕ್ರೈಂದೇಶ-ವಿದೇಶ

ಸರ್ಕಾರಿ ಬಸ್ ನೊಳಗೆ ಅತ್ಯಾಚಾರ: ಆರೋಪಿ ಅರೆಸ್ಟ್..! ಪೊಲೀಸರ ವೇಷದಲ್ಲಿ ಓಡಾಡುತ್ತಿದ್ದವ ಅಂದರ್..!

607
Spread the love

ನ್ಯೂಸ್‌ ನಾಟೌಟ್ : ಪುಣೆಯ ಸ್ವಾರ್ಗೇಟ್​ ಬಸ್​ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನು ಪುಣೆಯ ಗುನಾತ್ ಗ್ರಾಮದ ದತ್ತಾತ್ರಯ ರಾಮದಾಸ್ ಗಡೆ (37) ಎಂದು ಗುರುತಿಸಲಾಗಿದೆ. ಆರೋಪಿಯನ್ನು ಶಿರೂರಿನಲ್ಲಿ ಬಂಧಿಸಿರುವ ಪೊಲೀಸರು, ಪುಣೆಗೆ ಕರೆತರುತ್ತಿದ್ದಾರೆ.

ಬಂಧಿತ ಆರೋಪಿ ಮಂಗಳವಾರ ಬೆಳಿಗ್ಗೆ ಪೊಲೀಸ್ ಠಾಣೆಯಿಂದ 100 ಮೀಟರ್ ದೂರದಲ್ಲಿದ್ದ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸ್ವರ್ಗೇಟ್ ಬಸ್ ನಿಲ್ದಾಣದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದ.
ಆರಂಭದಲ್ಲಿ ಮಹಿಳೆಯನ್ನು ಅಕ್ಕ ಎಂದು ಕರೆದು ಮಾತಾಡಿಸಿದ್ದ ಆರೋಪಿ, ಬಳಿಕ ಸತಾರಾಕ್ಕೆ ಹೋಗುವ ಬಸ್ ಮತ್ತೊಂದು ಪ್ಲಾಟ್‌ ಫಾರ್ಮ್‌ಗೆ ಬಂದಿದೆ ಎಂದು ಹೇಳಿ, ನಿಲ್ಲಿಸಿದ್ದ ಖಾಲಿ ಬಸ್‌ ಬಳಿ ಕರೆದೊಯ್ದಿದ್ದ. ಮಹಿಳೆ ಬಸ್ ನೊಳಗೆ ಲೈಟ್‌ ಆನ್‌ ಇರದ ಕಾರಣ ಬಸ್‌ ಹತ್ತಲು ಹಿಂಜರಿದಿದ್ದಳು. ಈ ವೇಳೆ, ಇದೇ ಸರಿಯಾದ ಬಸ್‌ ಎಂದು ಹೇಳಿ ಒಳಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾಳೆ.

ಆರೋಪಿಯು ಹಲವಾರು ತಿಂಗಳುಗಳಿಂದ ಪೊಲೀಸರ ಸೋಗಿನಲ್ಲಿ ಓಡಾಡಿಕೊಂಡಿದ್ದ ಎಂದು ಹೇಳಲಾಗಿದೆ. ಆತನ ವಿರುದ್ಧ ಪುಣೆ ಮತ್ತು ಅಹಲ್ಯಾನಗರ ಜಿಲ್ಲೆಗಳಲ್ಲಿ ಕಳ್ಳತನ, ದರೋಡೆ ಮತ್ತು ಸರಗಳ್ಳತನದ ಪ್ರಕರಣಗಳಿವೆ ಎಂದು ತಿಳಿದುಬಂದಿದೆ.

ಅಲ್ಲದೆ, ಪ್ರಕರಣ ಒಂದರಲ್ಲಿ ಆತ 2019ರಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ಈ ನಡುವೆ ಆರೋಪಿ ಬಂಧನಕ್ಕಾಗಿ ಪೊಲೀಸರು ಮಹಾರಾಷ್ಟ್ರದಾದ್ಯಂತ ಒಟ್ಟು 13 ತಂಡಗಳನ್ನು ನಿಯೋಜಿಸಿದ್ದರು. ಶೋಧ ಕಾರ್ಯಾಚರಣೆಯ ಭಾಗವಾಗಿ ಸ್ನಿಫರ್ ಡಾಗ್ಸ್ ಮತ್ತು ಡ್ರೋನ್‌ ಗಳನ್ನೂ ಕೂಡ ಬಳಸಲಾಗಿತ್ತು. ಆರೋಪಿ ಇರುವಿಕೆಯ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ನಗದು ಬಹುಮಾನವನ್ನೂ ಕೂಡ ಪುಣೆ ಪೊಲೀಸರು ಘೋಷಿಸಿದ್ದರು. ಆದರೆ, ಪೊಲೀಸರೇ ಈಗ ಆತನನ್ನು ಸೆರೆ ಹಿಡಿದಿದ್ದಾರೆ.

See also  Free Bus ಮೇಲೆ ‘ಶಕ್ತಿ’ ತೋರಿದ್ದ ಮಹಿಳೆಗೆ 5 ಸಾವಿರ ದಂಡ! ಅಷ್ಟಕ್ಕೂ ಚಲಿಸುತ್ತಿದ್ದ ಸರ್ಕಾರಿ ಬಸ್ ಗೆ ಕಲ್ಲೆಸೆದಿದ್ದೇಕೆ?
  Ad Widget   Ad Widget   Ad Widget   Ad Widget