ಕ್ರೈಂದೇಶ-ಪ್ರಪಂಚ

ಅಮಿತ್‌ ಶಾ ರ‍್ಯಾಲಿಯಿಂದ ಹಿಂದಿರುಗುವಾಗ ಬಸ್ಸ್ ಅವಘಡ: 6ಕ್ಕೂ ಹೆಚ್ಚು ಜನ ಮೃತ್ಯು ?

ನ್ಯೂಸ್ ನಾಟೌಟ್: ಮಧ್ಯಪ್ರದೇಶದ ಸಿಧಿಯಲ್ಲಿ ಶುಕ್ರವಾರ ಫೆ.೨೪ ರಂದು ತಡರಾತ್ರಿ ಟ್ರಕ್‌ವೊಂದು ಎರಡು ಬಸ್‌ಗಳಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಸಾವನ್ನಪ್ಪಿದ್ದು, 50 ಮಂದಿ ಗಾಯಗೊಂಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರ‍್ಯಾಲಿಯಿಂದ ಹಿಂದಿರುಗುತ್ತಿದ್ದ ವೇಳೆ ಜನರನ್ನು ಸಾಗಿಸುತ್ತಿದ್ದ ಎರಡು ಬಸ್‌ಗಳಿಗೆ ಟ್ರಕ್‌ ಡಿಕ್ಕಿ ಹೊಡೆದ ಪರಿಣಾಮ ಬರ್ಖಾಡಾ ಗ್ರಾಮದ ಬಳಿ ಈ ಘಟನೆ ನಡೆದಿದೆ.

ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್‌ ಶಾ ರಾಜಕೀಯ ರ‍್ಯಾಲಿಯಲ್ಲಿ ಪಾಲ್ಗೊಂಡು ಬರ್ಖಾಡಾ ಗ್ರಾಮದ ಬಳಿ ಬಸ್‌ಗಳಲ್ಲಿ ಜನರು ಸತ್ನಾ ನಗರದ ‘ಕೋಲ್ ಮಹಾಕುಂಭ’ದಿಂದ ಹಿಂತಿರುಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.

ಅಧಿಕಾರಿಗಳ ಪ್ರಕಾರ, ಟ್ರಕ್‌ನಲ್ಲಿ ಟೈರ್ ಸ್ಫೋಟಗೊಂಡಿದ್ದರಿಂದ ಈ ದುರ್ಘಟನೆ ಸಂಭವಿಸಿದೆ. ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಎಸ್ಪಿ ಮುಕೇಶ್ ಶ್ರೀವಾಸ್ತವ ರೇವಾ ಮಾಹಿತಿ ನೀಡಿದ್ದಾರೆ. ‘ಎರಡು ಬಸ್ಸುಗಳು ರಸ್ತೆ ಬದಿಯಲ್ಲಿ ನಿಂತಿದ್ದವು, ಈ ವೇಳೆ ಹಿಂದಿನಿಂದ ಬಂದ ಟ್ರಕ್ ಟೈರ್ ಒಡೆದ ಪರಿಣಾಮ ನಿಯಂತ್ರಣ ನಿಯಂತ್ರಣ ಕಳೆದುಕೊಂಡು ಈ ದುರ್ಘಟನೆ ಸಂಭವಿಸಿದೆ, ಘಟನೆಯಲ್ಲಿ 20-50 ಜನರು ತೀವ್ರವಾಗಿ ಗಾಯಗೊಂಡಿದ್ದು, ಎಎನ್ ಐ ವರದಿ ಪ್ರಕಾರ ಕನಿಷ್ಟ 6 ಮಂದಿ ಮೃತ ಪಟ್ಟಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಬಗ್ಗೆ ಪೊಲೀಸ್ ತನಿಖೆ ನಡೆಯುತ್ತಿದೆ.

ಸಂತಾಪ ಸೂಚಿಸಿದ ಅಮಿತ್‌ ಶಾ:

‘ರಸ್ತೆ ಅಪಘಾತವು ತುಂಬಾ ದುಃಖಕರವಾಗಿದೆ. ಈ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ನಾನು ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ದೇವರು ಅವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ. ಪಕ್ಷದ ವತಿಯಿಂದ ಗಾಯಾಳುಗಳಿಗೆ ಚಿಕಿತ್ಸೆ ಒದಗಿಸಲಾಗುತ್ತಿದೆ, ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ” ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

Related posts

ಮಾಜಿ ಪತಿ ನಾಗ ಚೈತನ್ಯ ನಿಶ್ಚಿತಾರ್ಥ ಬೆನ್ನಲ್ಲೇ ಸಮಂತಾಗೆ ಪ್ರಪೋಸ್ ಮಾಡಿದ ಯೂಟ್ಯೂಬರ್..! ಒಪ್ಪಿಗೆ ಇದೆ ಎಂದ ಸಮಂತಾ..! ಮತ್ತೆ ಮದುವೆಯಾಗ್ತಾರಾ ನಟಿ..?

ಮಡಿಕೇರಿ: ಅಕ್ರಮ ಉಡ ಮಾರಾಟಕ್ಕೆ ಯತ್ನ, ಮೂವರು ಅರೆಸ್ಟ್

ಆಗುಂಬೆ ಘಾಟಿಯಲ್ಲಿ ಭೀಕರ ಅಪಘಾತ, ನಾಲ್ವರು ಸಾವು