ನ್ಯೂಸ್ ನಾಟೌಟ್: ಸುಳ್ಯ ತಾಲೂಕಿನ ಸಂಪಾಜೆಯ ಗೂನಡ್ಕದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯೂತ್ಸವವನ್ನು ಧ್ವಜಾರೋಹಣ ಕಾರ್ಯಕ್ರಮದೊಂದಿಗೆ ಸಂಭ್ರಮದಿಂದ ಆಚರಿಸಲಾಯಿತು. ಶಾಲೆಯ ಎಸ್ ಡಿಎಂಸಿ ಅಧ್ಯಕ್ಷ ರವೀಂದ್ರ ದೊಡ್ಡಡ್ಕ ಧ್ವಜಾರೋಹಣ ನೆರವೇರಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಮತಿ ಶಕ್ತಿವೇಲು, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಎಸ್. ಕೆ. ಹನೀಫ್ , ಗ್ರಾಮ ಪಂಚಾಯತ್ ಸದಸ್ಯೆ ಅನುಪಮಾ, ವಿಮಲ ಪ್ರಸಾದ್, ಶಿಕ್ಷಕ ಭವಾನಿ ಶಂಕರ್, ದೊಡ್ಡಡ್ಕ ಕೊರಗಜ್ಜ ದೈವಸ್ಥಾನದ ಮೊಕ್ತೇಸರ ಜಿ.ಕೆ.ಚಂದ್ರಶೇಖರ್ ದೊಡ್ಡಡ್ಕ ಸೇರಿದಂತೆ ಶಾಲೆಯ ಎಲ್ಲ ಮುಖ್ಯೋಪಾಧ್ಯಾಯರು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.