ನ್ಯೂಸ್ ನಾಟೌಟ್: ದೇಶದಾದ್ಯಂತ ಸಂಭ್ರಮದಿಂದ ಆಚರಿಸಲ್ಪಟ್ಟ 79ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮವು ಹತ್ತು ಹಲವು ವಿಶೇಷತೆಯಿಂದ ಕೂಡಿತ್ತು. ಅಂತೆಯೇ ಆ.15ರಂದು ಸಂಪಾಜೆ ಗ್ರಾಮ ಪಂಚಾಯತ್ ಕಚೇರಿಯಲ್ಲೂ ಧ್ವಜಾರೋಹಣವನ್ನು ನೆರವೇರಿಸಲಾಯಿತು. ಪಂಚಾಯತ್ ಅಧ್ಯಕ್ಷೆ ಸುಮತಿ ಶಕ್ತಿವೇಲು ಧ್ವಜಾರೋಹಣ ಮಾಡಿದರು. ಸಂಪಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಎಸ್ .ಕೆ. ಹನೀಫ್, ಮಾಜಿ ಪಂಚಾಯತ್ ಅಧ್ಯಕ್ಷ ಜಿ.ಕೆ. ಹಮೀದ್, ಟಿಎಂ ಶಹೀದ್, ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸೋಮಶೇಖರ್ ಕೆ.ಆರ್ , ಜಗದೀಶ್, ಕೆ.ಪಿ.ಜಾನಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.