ನ್ಯೂಸ್ ನಾಟೌಟ್ :ಸುಳ್ಯದ ಕೆ.ವಿ.ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 79ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷರು ಡಾ. ಕೆ ವಿ ಚಿದಾನಂದ ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ಸಾರಿದರು.ಕಾರ್ಯಕ್ರಮದಲ್ಲಿ ಕಾಲೇಜಿನ ಡೀನ್ ಡಾ. ನೀಲಾಂಬಿಕೈ ನಟರಾಜನ್, ಮೆಡಿಕಲ್ ಸೂಪರಿಂಟೆಂಡೆಂಟ್ ಡಾ ಸಿ ರಾಮಚಂದ್ರ ಭಟ್, ಮೈಕ್ರೋಬಯಾಲಜಿ ವಿಭಾಗದ ಪ್ರೊ. ಡಾ. ನಮ್ರತಾ ಕೆ. ಜಿ, ಪೆತಾಲಜಿ ವಿಭಾಗದ ಪ್ರೊ.ಡಾ ನವ್ಯ, ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ ಪ್ರಾಂಶುಪಾಲರು ಡಾ ಪ್ರಮೋದ್ ಕೆ.ಜೆ, ಕಾಲೇಜಿನ ದೈಹಿಕ ಶಿಕ್ಷಣ ನಿನಿರ್ದೇಶಕರು ಮಿಥುನ್ ಹಾಗೂ ಎಲ್ಲಾ ವಿಭಾಗಗಳ ಪ್ರಾಂಶುಪಾಲರು, ಪ್ರಾದ್ಯಾಪಕರು, ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸಂಸ್ಥೆಯ ಬೋಧಕ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.