Latestಕ್ರೈಂದೇಶ-ವಿದೇಶವೈರಲ್ ನ್ಯೂಸ್

ಭಾರತದಲ್ಲಿ ಪಾಕ್ ಧ್ವಜ, ಸರಕುಗಳ ಮಾರಾಟ ನಿಲ್ಲಿಸುವಂತೆ ಇ-ಕಾಮರ್ಸ್ ಕಂಪನಿಗಳಿಗೆ ಕೇಂದ್ರ ಎಚ್ಚರಿಕೆ..! ಇಲ್ಲಿದೆ ಸಂಪೂರ್ಣ ಮಾಹಿತಿ

560

ನ್ಯೂಸ್ ನಾಟೌಟ್: ಭಾರತದಲ್ಲಿ ಪಾಕಿಸ್ತಾನದ ಧ್ವಜ ಹಾಗೂ ಸರಕುಗಳ ಮಾರಾಟವನ್ನು ತಕ್ಷಣದಿಂದ ನಿಲ್ಲಿಸುವಂತೆ ಅಮೆಜಾನ್ ಇಂಡಿಯಾ, ಫ್ಲಿಪ್‌ ಕಾರ್ಟ್ ಸೇರಿದಂತೆ ಪ್ರಮುಖ ಇ-ಕಾಮರ್ಸ್ ಕಂಪನಿಗಳಿಗೆ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ ಎಚ್ಚರಿಕೆ ನೀಡಿದೆ.

ಈ ಕುರಿತು ಕೇಂದ್ರ ಗ್ರಾಹಕ ವ್ಯವಹಾರ ಮತ್ತು ಆಹಾರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿ, ಪಾಕಿಸ್ತಾನ ಧ್ವಜ ಹಾಗೂ ಸರಕುಗಳ ಮಾರಾಟವನ್ನು ತಕ್ಷಣದಿಂದ ನಿಲ್ಲಿಸಬೇಕು ಹಾಗೂ ಯಾವುದೇ ಸರಕುಗಳಿದ್ದರೂ ಅವುಗಳನ್ನು ಪಟ್ಟಿಯಿಂದ ತೆಗೆದು ಹಾಕಬೇಕು. ಈ ಸಂಬಂಧ ರಾಷ್ಟ್ರೀಯ ಕಾನೂನು ಪಾಲಿಸಬೇಕು ಎಂದು ತಿಳಿಸಿದರು.

ಇದಕ್ಕೂ ಮೊದಲು ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟವು ಪತ್ರದ ಮೂಲಕ, ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಇ-ಕಾಮರ್ಸ್ ಪ್ಲಾಟ್‌ ಫಾರ್ಮ್‌ಗಳಲ್ಲಿ ಪಾಕಿಸ್ತಾನಿ ಧ್ವಜಗಳು ಮತ್ತು ಇತರ ಸರಕುಗಳ ಮಾರಾಟವನ್ನು ನಿಷೇಧಿಸುವಂತೆ ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಮತ್ತು ಪ್ರಹ್ಲಾದ್ ಜೋಶಿ ಅವರನ್ನು ಒತ್ತಾಯಿಸಿತ್ತು.

ಪತ್ರದಲ್ಲಿ `ಆಪರೇಷನ್ ಸಿಂಧೂರ’ದ ಬಳಿಕ ಇ-ಕಾಮರ್ಸ್ ಪ್ಲಾಟ್‌ ಫಾರ್ಮ್‌ ಗಳಲ್ಲಿ ಪಾಕಿಸ್ತಾನಿ ಧ್ವಜಗಳು ಮತ್ತು ಇತರ ಸರಕುಗಳ ಮಾರಾಟ ಮಾಡುವುದು ಕಂಡುಬರುತ್ತಿದೆ. ಅಮೆಜಾನ್ ಮತ್ತು ಫ್ಲಿಪ್‌ ಕಾರ್ಟ್ ನಂತಹ ಪ್ರಮುಖ ಇ-ಕಾಮರ್ಸ್ ವೇದಿಕೆಗಳಲ್ಲಿ ಪಾಕಿಸ್ತಾನಿ ಧ್ವಜಗಳು, ಲೋಗೋ ಹೊಂದಿರುವ ಮಗ್‌ ಗಳು ಮತ್ತು ಟಿ-ಶರ್ಟ್‌ ಗಳನ್ನು ಬಹಿರಂಗವಾಗಿ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ ಎಂದು ಉಲ್ಲೇಖಿಸಿದ್ದಾರೆ. 

‘ಐಡಿಬಿಐ’ನಿಂದ 676 ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ

ಮದುವೆ ಪಾರ್ಟಿಯಲ್ಲಿ ಯುವತಿ ಜೊತೆ ಶಾಸಕನ ಅಶ್ಲೀಲ ಕೃತ್ಯ ವೈರಲ್..! ವಿಡಿಯೋ ಬಗ್ಗೆ ಶಾಸಕ ಹೇಳಿದ್ದೇನು..?

See also  ಇನ್ನು ಸಿಮ್ ಕಾರ್ಡ್ ಪಡೆಯುವುದು ಸುಲಭವಲ್ಲ..! 67,000 ಸಿಮ್ ಕಾರ್ಡ್ ಡೀಲರ್‌ಗಳನ್ನು ಕಪ್ಪು ಪಟ್ಟಿಗೆ ಸೇರಿಸಿದ್ದೇಕೆ? ಈ ಬಗ್ಗೆ ಕೇಂದ್ರ ಸರ್ಕಾರ ರೂಪಿಸಿದ ನಿಯಮಗಳೇನು?
  Ad Widget   Ad Widget   Ad Widget   Ad Widget   Ad Widget   Ad Widget   Ad Widget