Latestಕ್ರೀಡೆಕ್ರೈಂವಿಡಿಯೋವೈರಲ್ ನ್ಯೂಸ್

ಭಾರತ ಚಾಂಪಿಯನ್ಸ್‌ ಟ್ರೋಫಿ ಗೆದ್ದ ಖುಷಿಯಲ್ಲಿ ರಸ್ತೆಗಿಳಿದು ಹುಚ್ಚಾಟ..! ಅಭಿಮಾನಿಗಳ ಮೇಲೆ ಲಾಠಿ ಬೀಸಿದ ಪೊಲೀಸರು..!

289
Spread the love

ನ್ಯೂಸ್ ನಾಟೌಟ್: ಭಾರತ ತಂಡವು ನ್ಯೂಜಿಲೆಂಡ್‌ ತಂಡವನ್ನು ನಾಲ್ಕು 4 ವಿಕೆಟ್‌ ಗಳಿಂದ ಸೋಲಿಸಿ ಚಾಂಪಿಯನ್ಸ್‌ ಟ್ರೋಫಿ ಕಿರೀಟವನ್ನು ತನ್ನದಾಗಿಸಿಕೊಂಡಿದೆ. ಟೀಂ ಇಂಡಿಯಾ ಚಾಂಪಿಯನ್ಸ್‌ ಟ್ರೋಫಿ ಗೆದ್ದ ಖುಷಿಗೆ ದೇಶದೆಲ್ಲೆಡೆ ಸಂಭ್ರಮ ಮನೆ ಮಾಡಿದ್ದು, ಕ್ರಿಕೆಟ್‌ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಅದೇ ರೀತಿ ಹೈದರಾಬಾದ್‌ ಕ್ರಿಕೆಟ್‌ ಅಭಿಮಾನಿಗಳು ರಸ್ತೆಗಿಳಿದು ಗೆಲುವನ್ನು ಸಂಭ್ರಮಿಸಿದ್ದು, ಸಂಭ್ರಮಾಚರಣೆಯಲ್ಲಿದ್ದ ಅಭಿಮಾನಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್‌ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗುತ್ತಿದೆ.

ಈ ಘಟನೆ ಹೈದರಾಬಾದ್‌ ನ ದಿಲ್‌ ಸುಖ್‌ ನಗರದಲ್ಲಿ ನಡೆದಿದ್ದು, ಭಾರತ ತಂಡ ಚಾಂಪಿಯನ್ಸ್‌ ಟ್ರೋಫಿ ಗೆದ್ದ ಖುಷಿಯಲ್ಲಿ ರಸ್ತೆಗಿಳಿದು ಸಂಭ್ರಮಾಚರಣೆಯಲ್ಲಿ ತೊಡಗಿದ್ದ ಅಭಿಮಾನಿಗಳ ಮೇಲೆ ಪೊಲೀಸರು ಲಾಠಿ ಬೀಸಿದ್ದಾರೆ.

ವರದಿಗಳ ಪ್ರಕಾರ ಅಭಿಮಾನಿಗಳು ರಸ್ತೆಗಿಳಿದು ಪಟಾಕಿ ಸಿಡಿಸಿ, ಡ್ಯಾನ್ಸ್‌ ಮಾಡುವ ಮೂಲಕ ಟೀಂ ಇಂಡಿಯಾದ ಗೆಲುವನ್ನು ಸಂಭ್ರಮಿಸಿದ್ದು, ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಕಾರಣ ಸಂಚಾರ ದಟ್ಟಣೆ ಉಂಟಾಗಿದೆ. ಈ ಸಂದರ್ಭದಲ್ಲಿ ಇದನ್ನು ನಿಯಂತ್ರಿಸಲು ಸಾಧ್ಯವಾಗದ ಕಾರಣ ರಸ್ತೆಗಿಳಿದ ಅಭಿಮಾನಿಗಳ ಮೇಲೆ ಹೈದರಾಬಾದ್‌ ಪೊಲೀಸರು ಲಾಠಿ ಚಾರ್ಜ್‌ ಮಾಡಿದ್ದಾರೆ.

See also  ತ್ರಿಲ್ಲರ್, ಹಾರರ್ ಸ್ಪರ್ಶದ ಜೊತೆ ತುಳುನಾಡಿನ ದೈವದೇವರ ನಂಬಿಕೆಯ ಕಥೆ ‘ಬಲಿಪೆ’, ಈ ಬಗ್ಗೆ ಚಿತ್ರ ನಟಿ ಹೇಳಿದ್ದೇನು..? ಇಲ್ಲಿದೆ ಸಂಪೂರ್ಣ ಮಾಹಿತಿ
  Ad Widget   Ad Widget   Ad Widget