Latestಕ್ರೈಂದೇಶ-ವಿದೇಶ

ಭಾರತದ ದಾಳಿಯಲ್ಲಿ 31 ಮಂದಿ ಹತ್ಯೆ, 46 ಮಂದಿಗೆ ಗಾಯವಾಗಿದೆ ಎಂದ ಪಾಕ್‌ ಸೇನಾ ವಕ್ತಾರರು..! ಇಲ್ಲಿದೆ ಸಂಪೂರ್ಣ ಮಾಹಿತಿ

596

ನ್ಯೂಸ್ ನಾಟೌಟ್: ಭಾರತೀಯ ಸೇನೆ ʻಆಪರೇಷನ್‌ ಸಿಂಧೂರʼ (Operation Sindoor) ಹೆಸರಿನಡಿ ಉಗ್ರ ನೆಲೆಗಳ ಮೇಲೆ ನಡೆಸಿದ ಪ್ರತೀಕಾರದ ದಾಳಿಯಲ್ಲಿ 31 ಮಂದಿ ಸಾವನ್ನಪ್ಪಿದ್ದು, 46 ಮಂದಿ ಗಾಯಗೊಂಡಿರುವುದಾಗಿ ಪಾಕ್‌ ಸೇನೆ ಹೊಣೆ ಹೊತ್ತುಕೊಂಡಿದೆ.

ಭಾರತದ ದಾಳಿಯಲ್ಲಿ JEM ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್‌ ಅಜರ್‌ ಕುಟುಂಬದ 10 ಜನ ಸೇರಿದಂತೆ ಒಟ್ಟು 31 ಮಂದಿ ಸಾವನ್ನಪ್ಪಿದ್ದು, 46 ಮಂದಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಿರಬಹುದು ಎಂದು ಪಾಕ್‌ ಸೇನಾ ವಕ್ತಾರರು ಹೇಳಿದ್ದಾರೆ.

ಕಳೆದ ಏಪ್ರಿಲ್‌ 22ರಂದು ಕಾಶ್ಮೀರದ ಪೆಹಲ್ಗಾಮ್‌ ನ ಬೈಸರನ್‌ ಕಣಿವೆ ಪ್ರದೇಶದಲ್ಲಿ ನಾಲ್ವರು ಉಗ್ರರು ಓರ್ವ ವಿದೇಶಿ ಪ್ರಜೆ ಸೇರಿದಂತೆ 26 ಪ್ರವಾಸಿಗರನ್ನ ಗುಂಡಿಕ್ಕಿ ಕೊಂದಿದ್ದರು. ಇದಕ್ಕೆ ಪ್ರತೀಕಾರ ತೀರಿಸಿಕೊಳ್ಳಲು ಪಣ ತೊಟ್ಟಿದ್ದ ಭಾರತ ಮಂಗಳವಾರ ತಡರಾತ್ರಿ 1:44 ಗಂಟೆ ಸುಮಾರಿಗೆ ಪಾಕ್‌ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದೆ.
ದಾಳಿಯಲ್ಲಿ ಪಾಕ್‌ ಸೇನೆಯಾಗಲಿ ಅಥವಾ ನಾಗರಿಕರ ಮೇಲಾಗಲಿ ದಾಳಿ ಮಾಡದೇ ಉಗ್ರರ ನೆಲೆಗಳನ್ನು ಮಾತ್ರವೇ ಗುರಿಯಾಗಿಸಿ ದಾಳಿ ನಡೆಸಿದೆ.

ಭಾರತ ಧ್ವಂಸ ಮಾಡಿರುವ ಈ ಉಗ್ರರ ನೆಲೆಗಳು ಮೋಸ್ಟ್‌ ಡೇಂಜರಸ್‌ ತಾಣಗಳು ಎಂದೇ ಗುರುತಿಸಿಕೊಂಡಿದ್ದು, ಇಡೀ ವಿಶ್ವಕ್ಕೆ ಕಂಟಕವಾಗಿದ್ದವು. ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಇಲ್ಲಿ ಅಡಗಿಸಿಡಲಾಗಿತ್ತು. ಜೊತೆಗೆ ವಿಶ್ವಾದ್ಯಂತ ವಿವಿಧೆಡೆಗೆ ಕಳುಹಿಸಲು ಉಗ್ರರಿಗೆ ಇಲ್ಲಿ ತರಬೇತಿ ನೀಡಲಾಗುತ್ತಿತ್ತು ಅನ್ನೋ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿದೆ.

ಬಲೂಚ್ ನ ಪ್ರತ್ಯೇಕತಾವಾದಿಗಳ ಬಾಂಬ್ ದಾಳಿಗೆ 12 ಪಾಕ್ ಸೈನಿಕರು ಸಾವು..! ವಿಡಿಯೋ ವೈರಲ್

See also  ಸುಳ್ಯ: ಕುದ್ಪಾಜೆಯ 20 ಮನೆಗಳನ್ನು ಶನಿವಾರದಿಂದ ಕಗ್ಗತ್ತಲಿನಲ್ಲಿರಿಸಿದ ಮೆಸ್ಕಾಂ..!, ಸುಳ್ಯ, ಮಂಗಳೂರಿಗೆ ದೂರು ಕೊಟ್ಟರೂ ಪ್ರಯೋಜನವಿಲ್ಲ..! ಎಂಥಾ ಅವಸ್ಥೆ ಮಾರಾಯೆರೇ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget