Latestಕ್ರೈಂದೇಶ-ವಿದೇಶ

ಭಾರತ- ಪಾಕ್ ಸಂಘರ್ಷ: ಕುತುಬ್ ಮಿನಾರ್ ಸೇರಿ ದೆಹಲಿಯ ಹಲವು ಐತಿಹಾಸಿಕ ತಾಣಗಳಿಗೆ ಬಿಗಿಭದ್ರತೆ..! ಹೆಚ್ಚುವರಿ ಪೊಲೀಸ್ ಸಿಬ್ಬಂದಿ ನಿಯೋಜನೆ..!

317

ನ್ಯೂಸ್ ನಾಟೌಟ್: ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯಿಂದಾಗಿ ಕುತುಬ್ ಮಿನಾರ್, ಕೆಂಪು ಕೋಟೆ ಸೇರಿ ದೆಹಲಿ ಹಲವು ಐತಿಹಾಸಿಕ ತಾಣಗಳಿಗೆ ಭದ್ರತೆ ಹೆಚ್ಚಿಸಲಾಗಿದೆ.
ಪಹಲ್ಗಾಮ್ ದಾಳಿಯ ಬಳಿಕ ಭಾರತ ಹಾಗೂ ಪಾಕ್ ನಡುವಿನ ಕಾದಾಟ ಹೆಚ್ಚಾಗುತ್ತಿದೆ. ಹಿಂದೂಗಳ ನರಮೇಧಕ್ಕೆ ಪ್ರತೀಕಾರವಾಗಿ `ಆಪರೇಷನ್ ಸಿಂಧೂರ’ದಡಿಯಲ್ಲಿ ಭಾರತೀಯ ಸೇನೆ ಪಾಕ್ ಮತ್ತು ಪಿಒಕೆಯ ಉಗ್ರರ ಅಡಗುತಾಣಗಳ ಮೇಲೆ ವಾಯುದಾಳಿ ನಡೆಸಿತ್ತು. ಬಳಿಕ ಗುರುವಾರ ರಾತ್ರಿ ಪಾಕಿಸ್ತಾನ ನಡೆಸಿದ ಕ್ಷಿಪಣಿ ದಾಳಿ ಬೆನ್ನಲ್ಲೇ ಭಾರತವು ತಕ್ಕ ಉತ್ತರ ನೀಡಿದೆ.

ಇದರ ಪರಿಣಾಮ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚುತ್ತಿದೆ. ಹೀಗಾಗಿ, ದೆಹಲಿ ಪೊಲೀಸರು ಕೆಂಪು ಕೋಟೆ, ಕುತುಬ್ ಮಿನಾರ್ ಸೇರಿದಂತೆ ನಗರದ ಐತಿಹಾಸಿಕ ಸ್ಮಾರಕಗಳ ಸುತ್ತಲೂ ಭದ್ರತೆ ಹೆಚ್ಚಿಸಿದ್ದು, ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಜೊತೆಗೆ ಮುನ್ನೆಚ್ಚರಿಕೆ ಕ್ರಮವಾಗಿ ಸಿಸಿಟಿವಿ ಕ್ಯಾಮೆರಾಗಳ ಮೂಲಕ ಕಣ್ಗಾವಲು ಇರಿಸಲಾಗಿದೆ.

ಸಾಮಾನ್ಯವಾಗಿ ಐತಿಹಾಸಿಕ ತಾಣಗಳು ನಿಯಮಿತ ಭದ್ರತೆಯನ್ನು ಹೊಂದಿರುತ್ತವೆ. ಆದರೆ ಸದ್ಯದ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಭದ್ರತೆ ಹೆಚ್ಚಿಸಲಾಗಿದೆ. ಜೊತೆಗೆ ದೆಹಲಿಯ ಐತಿಹಾಸಿಕ ಸ್ಥಳಗಳಿಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಹೆಚ್ಚಿರುವುದರಿಂದ ಅವರ ಸುರಕ್ಷತೆಗಾಗಿ ಪೊಲೀಸರು ಈ ನಿರ್ಧಾರ ಕೈಗೊಂಡಿದ್ದಾರೆ.

ಅಗತ್ಯ ಬಿದ್ದರೆ ಮದರಸಾದ ಮಕ್ಕಳನ್ನು ಯುದ್ಧಕ್ಕೆ ಬಳಸಿಕೊಳ್ತೀವಿ ಎಂದ ಪಾಕ್‌ ರಕ್ಷಣಾ ಸಚಿವ..! ಇಲ್ಲಿದೆ ಸಂಪೂರ್ಣ ಮಾಹಿತಿ

See also  ಕಾಲ್ತುಳಿತಕ್ಕೆ 8 ಮತ್ತು 14 ವರ್ಷದ ಮಕ್ಕಳ ದುರಂತ ಸಾವು..! ಒಟ್ಟು 27 ಮಂದಿ ಆಸ್ಪತ್ರೆಗೆ ದಾಖಲು..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget