Latestಕ್ರೈಂದೇಶ-ವಿದೇಶವೈರಲ್ ನ್ಯೂಸ್

ದೇಶದ 28 ವಿಶ್ವವಿದ್ಯಾಲಯಗಳ ನಕಲಿ ಅಂಕಪಟ್ಟಿ ತಯಾರಿಸಿ ಮಾರಾಟ..! ನಿರುದ್ಯೋಗಿಗಳೇ ಈತನ ಬಂಡವಾಳ..!

770

ನ್ಯೂಸ್‌ ನಾಟೌಟ್ : ದೇಶದ 28 ವಿಶ್ವವಿದ್ಯಾಲಯಗಳ ನಕಲಿ ಅಂಕಪಟ್ಟಿ ತಯಾರಿಸಿ ನಿರುದ್ಯೋಗಿ ಯುವಕರಿಗೆ ಮಾರಾಟ ಮಾಡುತ್ತಿದ್ದ ಕಿಂಗ್ ಪಿನ್ ​​ನನ್ನು ಕಲಬುರಗಿಯ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ದೆಹಲಿ ಮೂಲದ ರಾಜೀವ ಸಿಂಗ್ ಆರೋರಾ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ನವದೆಹಲಿಯ ರಾಮಪಾರ್ಕ್ ಅಪಾರ್ಟ್ಮೆಂಟ್ ದ್ವಾರಕ್ ಮೋಡ್ ​ನಲ್ಲಿ ಈತನನ್ನು ಬಂಧಿಸಲಾಗಿದೆ.

ನಕಲಿ ಅಂಕಪಟ್ಟಿ ಜೊತೆಗೆ ಅಸ್ತಿತ್ವವೇ ಇಲ್ಲದ ನಕಲಿ ವಿಶ್ವವಿದ್ಯಾಲಯವನ್ನೂ ಸೃಷ್ಟಿ ಮಾಡಿ ಅದರ ಹೆಸರಲ್ಲಿ ನಕಲಿ ಅಂಕಪಟ್ಟಿ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.
ಬಂಧಿತ ಆರೋಪಿ ರಾಜೀವ ಸಿಂಗ್ ಆರೋರಾ ಕಳೆದ ಏಳೆಂಟು ವರ್ಷಗಳಿಂದ ನಕಲಿ ಅಂಕ ಪಟ್ಟಿ ತಯಾರಿ ದಂಧೆ ಮಾಡುತ್ತಿದ್ದ ಎನ್ನಲಾಗಿದೆ. ಪಿಯುಸಿ, ಡಿಪ್ಲೋಮಾ ಇನ್ ಎಜುಕೇಶನ್, ಡಿಪ್ಲೋಮಾ ಆಫ್ ಮೆಡಿಕಲ್ ಲ್ಯಾಬೋರೇಟರಿ ಟೆಕ್ನಾಲಜಿ, ಡಿಪ್ಲೋಮಾ ಇನ್ ಮೆಕ್ಯಾನಿಕಲ್ ಇಂಜಿನಿಯರಿಂಗ್, ಡಾಕ್ಟರ್ ಆಫ್ ಫಿಲಾಸಫಿ, ಬಿ ಟೇಕ್ ಸೇರಿ ವಿವಿಧ ಕೋರ್ಸ್​​ಗಳ ನಕಲಿ ಅಂಕಪಟ್ಟಿ ತಯಾರಿಸಿ ಮಾರಾಟ ಮಾಡುತ್ತಿದ್ದ ಎಂದು ತನಿಖೆಯಲ್ಲಿ ಬಯಲಾಗಿದೆ.

ಇದನ್ನೂ ಓದಿ: ಕುಂಭಮೇಳದ ತ್ರಿವೇಣಿ ಸಂಗಮದಲ್ಲಿ ಸ್ವಚ್ಛತಾ ಕಾರ್ಯ ಆರಂಭ,45 ದಿನಗಳಲ್ಲಿ 66 ಕೋಟಿ ಜನ ಭಾಗಿ..! 

ಸದ್ಯ ಬಂಧಿತನಿಂದ ಬರೋಬ್ಬರಿ 522 ನಕಲಿ ಅಂಕಪಟ್ಟಿಗಳು, 1626 ಖಾಲಿ ಅಂಕಪಟ್ಟಿಗಳು, 36 ಮೊಬೈಲ್, 2 ಲ್ಯಾಪ್‌ ಟಾಪ್, 1 ಪ್ರಿಂಟರ್​​, ವಿವಿಧ ವಿಶ್ವವಿದ್ಯಾಲಯಗಳ 122 ನಕಲಿ ಸೀಲ್​​ಗಳು, ಎಟಿಎಂ ಕಾರ್ಡ್ ಮತ್ತು ಆರೋಪಿಯ 123 ನಕಲಿ ಐಡಿಗಳು, ಆರೋಪಿಯ 85 ಬ್ಯಾಂಕ್ ಅಕೌಂಟ್​​​ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

See also  ಅರಂತೋಡು: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಜೀವನ್ಮರಣ ಸ್ಥಿತಿಯಲ್ಲಿದ್ದ ಪೊಲೀಸ್ ಪೇದೆ ಇನ್ನಿಲ್ಲ..! ಚಿಕಿತ್ಸೆ ಫಲಿಸದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹರೀಶ್ ನಿಧನ..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget