Latestಕ್ರೈಂದೇಶ-ವಿದೇಶ

ಸೇನಾ ಕಾರ್ಯಾಚರಣೆಯಲ್ಲಿ 10 ಉಗ್ರರ ಹತ್ಯೆ..! ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡು ವಶಕ್ಕೆ..!

662

ನ್ಯೂಸ್ ನಾಟೌಟ್: ಮಣಿಪುರದ ಚಂದೇಲ್‌ ಜಿಲ್ಲೆಯಲ್ಲಿ ಉಗ್ರರು ಮತ್ತು ಅಸ್ಸಾಂ ರೈಫಲ್ಸ್ ಘಟಕದೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ 10 ಮಂದಿ ಉಗ್ರರು ಹತ್ಯೆಯಾಗಿದ್ದಾರೆ. ಕಾರ್ಯಾಚರಣೆ ಇನ್ನೂ ಮುಂದುವರಿದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಕುರಿತು ಸೇನೆಯ ಪೂರ್ವ ಕಮಾಂಡ್ ಸಾಮಾಜಿಕ ಮಾಧ್ಯಮ ಎಕ್ಸ್‌ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ., ‘ಭಾರತ-ಮ್ಯಾನ್ಮಾರ್ ಗಡಿಗೆ ಸಮೀಪವಿರುವ ಚಂದೇಲ್ ಜಿಲ್ಲೆಯ ಖೆಂಗ್‌ ಜಾಯ್ ತಹಸಿಲ್‌ ನ ನ್ಯೂ ಸಮ್ತಾಲ್ ಗ್ರಾಮದ ಬಳಿ ಉಗ್ರರ ಚಲನವಲನಗಳ ಬಗ್ಗೆ ಗುಪ್ತಚರ ಅಧಿಕಾರಿಗಳು ನೀಡಿದ ಖಚಿತ ಮಾಹಿತಿ ಆಧರಿಸಿ ಅಸ್ಸಾಂ ರೈಫಲ್ಸ್ ಘಟಕವು ಮೇ 14 ರಂದು (ಬುಧವಾರ) ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು.

ಈ ವೇಳೆ ಶಂಕಿತರೊಂದಿಗೆ ಗುಂಡಿನ ಚಕಮಕಿ ನಡೆದಿದ್ದು, ಸೇನಾ ಪಡೆ ತಕ್ಕ ಪ್ರತ್ಯುತ್ತರ ನೀಡಿದೆ. ಒಟ್ಟು 10 ಮಂದಿ ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ದುಷ್ಟಶಕ್ತಿ ಓಡಿಸುತ್ತೇನೆಂದು ಮಹಿಳೆಗೆ 5 ಲಕ್ಷ ರೂ. ವಂಚಿಸಿದ ಜ್ಯೋತಿಷಿ..! ಹೋಟೆಲ್ ​ನಲ್ಲೇ ಪೂಜೆ, ಪ್ರಕರಣ ದಾಖಲು..!

See also  ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಬಂದಿದ್ದ 65ರ ವೃದ್ದೆ ಮೇಲೆ 24ರ ಯುವಕನಿಂದ ಅತ್ಯಾಚಾರ..! ಪೊಲೀಸ್ ಠಾಣೆಗೆ ದೂರು ನೀಡಿದ ಆಸ್ಪತ್ರೆಯ ಆಡಳಿತಾಧಿಕಾರಿ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget