ನ್ಯೂಸ್ ನಾಟೌಟ್: ಪಹಲ್ಗಾಮ್ ನರಮೇಧಕ್ಕೆ ಪ್ರತಿಯಾಗಿ ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ಆಪರೇಷನ್ ಸಿಂಧೂರ ದಾಳಿ ನಡೆಸಿದ್ದ ಭಾರತ, ಇದೀಗ ಪಾಕಿಸ್ತಾನದ ವಿರುದ್ದ ರಾಜತಾಂತ್ರಿಕ ದಾಳಿಗೆ ಅಸ್ತ್ರಗಳನ್ನು ಬಳಸಲು ನಿರ್ಧರಿಸಿದೆ. ವಿವಿಧ ರಾಜಕೀಯ ಪಕ್ಷಗಳಿಗೆ ಸೇರಿದ 7 ನಾಯಕರ ನೇತೃತ್ವದಲ್ಲಿ ಸಂಸದರ ನಿಯೋಗವೊಂದನ್ನು ಹಲವು ದೇಶಗಳಿಗೆ ಕಳುಹಿಸುವ ಮೂಲಕ ಪಾಕಿಸ್ತಾನದ ಉಗ್ರವಾದದ ಮುಖವಾಡ ಬಯಲು ಮಾಡಲು ಕೇಂದ್ರ ಮುಂದಾಗಿದೆ.
ಅಚ್ಚರಿಯ ವಿಷಯವೆಂದರೆ ಈ ಹಿಂದೆ ಕರ್ನಾಟಕ ವಿಧಾನಸಭೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ವಿವಾದದಲ್ಲಿ ಸಿಕ್ಕಿಹಾಕಿಕೊಂಡಿದ್ದ ಸಂಸದ ನಾಸಿರ್ ಹುಸೇನ್ ಹೆಸರನ್ನು ಕಾಂಗ್ರೆಸ್ ಕಳುಹಿಸಿದ್ದರೂ, ಸರ್ಕಾರ ಅವರನ್ನು ಪರಿಗಣಿಸಿಲ್ಲ. ಆದರೆ, ಕಾಂಗ್ರೆಸ್ ಹೆಸರು ಕಳುಹಿಸದೇ ಇದ್ದರೂ ಶಶಿ ತರೂರ್ ಅವರಿಗೆ ತಂಡದ ನೇತೃತ್ವ ನೀಡುವ ಮೂಲಕ ಅವರ ವಿದೇಶಾಂಗ ವಿಷಯಗಳ ನಿರ್ವಹಣೆಯ ಜ್ಞಾನಕ್ಕೆ ಮನ್ನಣೆ ನೀಡಿದೆ.
ಶುಕ್ರವಾರ ಕೇಂದ್ರ ಸರ್ಕಾರವು ನಿಯೋಗವನ್ನು ಕಳಿಸುವ ವಿಷಯ ಪ್ರಸ್ತಾಪ ಮಾಡಿತ್ತು. ಇದೀಗ ಈ ನಿಯೋಗಗಳ ನೇತೃತ್ವ ಯಾರು ವಹಿಸಲಿದ್ದಾರೆಂಬ ಮಾಹಿತಿಯನ್ನು ಬಿಡುಗಡೆ ಮಾಡಿದೆ. ಅದರನ್ವಯ ಬಿಜೆಪಿಯ ರವಿಶಂಕರ್ ಪ್ರಸಾದ್, ಬಿಜೆಡಿಯ ಬೈಜಯಂತ್ ಪಾಂಡಾ, ಜೆಡಿಯುನ ಸಂಜಯ್ ಕುಮಾರ್, ಕಾಂಗ್ರೆಸ್‌ನ ಶಶಿ ತರೂರ್, ಡಿಎಂಕೆಯ ಕನಿಮೋಳಿ, ಎನ್‌ಸಿಪಿ (ಶರದ್ ಬಣ) ಸುಪ್ರಿಯಾ ಸುಳೆ, ಶಿವಸೇನೆಯ ಶ್ರೀಕಾಂತ್ ಶಿಂಧೆ ಈ ನಿಯೋಗಗಳ ನಾಯಕತ್ವ ವಹಿಸಲಿದ್ದಾರೆ.
In a coordinated diplomatic outreach effort, the Government of India unveiled the composition of seven multi-party delegations that will visit over a dozen key partner countries to step up international pressure on Pakistan for its continued support to cross-border terrorism.… pic.twitter.com/kyo2mvcLsl
— The New Indian Express (@NewIndianXpress) May 17, 2025
ಮೇ 22ರಿಂದ ಪ್ರವಾಸ ಆರಂಭಿಸಲಿರುವ ಈ 1 ಸರ್ವಪಕ್ಷ ನಿಯೋಗಗಳು ವಿವಿಧ ದೇಶಗಳಿಗೆ ಹೋಗಿ, ಭಾರತದ ರಾಷ್ಟ್ರೀಯ ಒಮ್ಮತ ಮತ್ತು ಎಲ್ಲಾ ವಿಧದ ಭಯೋತ್ಪಾದನೆಯನ್ನು ಎದುರಿಸಲು ದೃಢನಿಶ್ಚಯವನ್ನು ಪ್ರದರ್ಶಿಸುತ್ತವೆ. ಉಗ್ರವಾದದ ವಿರುದ್ಧ ಶೂನ್ಯ ಸಹಿಷ್ಣುತೆಯ ಸಂದೇಶವನ್ನು ಜಗತ್ತಿಗೆ ಸಾರುತ್ತಾರೆ’ ಎಂದು ಸಂಸದೀಯ ವ್ಯವಹಾರ ಗಳ ಸಚಿವಾಲಯ ಪ್ರಕಟಣೆ ಹೊರಡಿಸಿದೆ.
ಇಟಲಿ ಪ್ರಧಾನಿಯನ್ನು ಮಂಡಿಯೂರಿ ಸ್ವಾಗತಿಸಿದ ಅಲ್ಬೇನಿಯಾ ದೇಶದ ಪ್ರಧಾನಿ..! ಇಲ್ಲಿದೆ ವಿಡಿಯೋ
ಇಸ್ರೋ ಇಂದು(ಮೇ.18) ಉಡಾವಣೆ ಮಾಡಿದ ಉಪಗ್ರಹ ಕಕ್ಷೆ ಸೇರುವಲ್ಲಿ ವಿಫಲ..! ಇಲ್ಲಿದೆ ಸಂಪೂರ್ಣ ಮಾಹಿತಿ