Latestಕ್ರೈಂದೇಶ-ವಿದೇಶ

ಭಾರತೀಯ ಹೈಕಮಿಷನ್‌ ಸಿಬ್ಬಂದಿಯನ್ನು 24 ಗಂಟೆಯೊಳಗೆ ದೇಶ ತೊರೆಯುವಂತೆ ಸೂಚಿಸಿದ ಪಾಕ್..! ಇಲ್ಲಿದೆ ಸಂಪೂರ್ಣ ಮಾಹಿತಿ

755
Representative image

ನ್ಯೂಸ್‌ ನಾಟೌಟ್‌: ನವದೆಹಲಿಯಲ್ಲಿರುವ ಪಾಕಿಸ್ತಾನ ರಾಜತಾಂತ್ರಿಕರನ್ನು ಭಾರತ ‘ಪರ್ಸನಾ ನಾನ್ ಗ್ರಾಟಾ’ ಎಂದು ಘೋಷಿಸಿದ ಕೆಲವೇ ಗಂಟೆಗಳಲ್ಲಿ ಪಾಕಿಸ್ತಾನ ಭಾರತದ ವಿರುದ್ಧ ಸೇಡು ತೀರಿಸಿಕೊಂಡಿದ್ದು, ಪಾಕಿಸ್ತಾನದಲ್ಲಿರುವ ಭಾರತೀಯ ಹೈಕಮಿಷನ್‌ ನ ಸಿಬ್ಬಂದಿಯನ್ನು ‘ಪರ್ಸನಾ ನಾನ್ ಗ್ರಾಟಾ’ ಎಂದು ಘೋಷಿಸಿದೆ.

ಭಾರತೀಯ ರಾಯಭಾರಿ ಅಧಿಕಾರಿಗಳನ್ನು ವಿದೇಶಾಂಗ ಸಚಿವಾಲಯಕ್ಕೆ ಕರೆಸಿಕೊಂಡಿರುವ ಪಾಕಿಸ್ತಾನ. ಅಲ್ಲಿ ತನ್ನ ನಿರ್ಧಾರವನ್ನು ತಿಳಿಸಿ, ಅಧಿಕಾರಿಯನ್ನು 24 ಗಂಟೆಗಳ ಒಳಗೆ ದೇಶವನ್ನು ತೊರೆಯುವಂತೆ ನಿರ್ದೇಶಿಸಿದೆ ಎಂದು ತಿಳಿದುಬಂದಿದೆ.

ಇಸ್ಲಾಮಾಬಾದ್‌ ನ ಭಾರತೀಯ ಹೈಕಮಿಷನ್‌ ನ ಸಿಬ್ಬಂದಿಯನ್ನು ಪರ್ಸನಾ ನಾನ್ ಗ್ರಾಟಾ ಎಂದು ಘೋಷಿಸಲಾಗಿದೆ. ಪಾಕಿಸ್ತಾನ ಸರ್ಕಾರವು ಇಸ್ಲಾಮಾಬಾದ್‌ ನ ಭಾರತೀಯ ಹೈಕಮಿಷನ್‌ ನ ಸಿಬ್ಬಂದಿಯನ್ನು ಅವರ ವಿಶೇಷ ಸ್ಥಾನಮಾನಕ್ಕೆ ಹೊಂದಿಕೆಯಾಗದ ಚಟುವಟಿಕೆಗಳಲ್ಲಿ ತೊಡಗಿದ್ದಕ್ಕಾಗಿ ಪರ್ಸನಾ ನಾನ್ ಗ್ರಾಟಾ ಎಂದು ಘೋಷಿಸಿದೆ ಎಂದು ಹೇಳಿಕೊಂಡಿದೆ. ಸಂಬಂಧಪಟ್ಟ ಅಧಿಕಾರಿಯನ್ನು 24 ಗಂಟೆಗಳ ಒಳಗೆ ಪಾಕಿಸ್ತಾನವನ್ನು ತೊರೆಯುವಂತೆ ನಿರ್ದೇಶಿಸಲಾಗಿದೆ. ಎಂದು ಪಾಕಿಸ್ತಾನದ ವಿದೇಶಾಂಗ ಸಚಿವಾಲಯ ತಿಳಿಸಿದೆ.

ಮಂಗಳವಾರ ನವದೆಹಲಿಯಲ್ಲಿರುವ ಪಾಕಿಸ್ತಾನ ಹೈಕಮಿಷನ್‌ನಲ್ಲಿ ಕೆಲಸ ಮಾಡುತ್ತಿರುವ ಪಾಕಿಸ್ತಾನಿ ಪ್ರಜೆಯೊಬ್ಬ ಭಾರತದಲ್ಲಿ ತಮ್ಮ ಅಧಿಕೃತ ಸ್ಥಾನಮಾನಕ್ಕೆ ಹೊಂದಿಕೆಯಾಗದ ಚಟುವಟಿಕೆಗಳಲ್ಲಿ ತೊಡಗಿದ್ದಕ್ಕಾಗಿ ಅವರನ್ನು ‘ಪರ್ಸನಾ ನಾನ್ ಗ್ರಾಟಾ’ ಎಂದು ಭಾರತ ಘೋಷಿಸಿತ್ತು. ಇದಕ್ಕೆ ಪ್ರತೀಕಾರವಾಗಿ ಈಗ ಪಾಕ್ ಭಾರತದ ರಾಯಭಾರಿಗಳನ್ನು ದೇಶ ತೊರೆಯುವಂತೆ ಹೇಳಿದೆ.

ಪಹಲ್ಗಾಮ್ ಭಯೋತ್ಪಾದನೆ ದಾಳಿಗೆ ಪ್ರತೀಕಾರವಾಗಿ ಭಾರತ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಳಿಕ ಗಡಿಯಾಚೆಗಿನ ನಾಲ್ಕು ರಾತ್ರಿಗಳು ನಡೆದ ಉಭಯ ದೇಶಗಳ ಮಿಲಿಟರಿ ಕಾರ್ಯಾಚರಣೆ ಬಳಿಕ ಮೇ 10 ರಂದು ಕದನ ವಿರಾಮ ಒಪ್ಪಂದ ಜಾರಿಯಾಗಿತ್ತು. ಇದರ ಬೆನ್ನಲ್ಲೇ ಇದೀಗ ಭಾರತ ಹಾಗೂ ಪಾಕಿಸ್ತಾನ ನಡುವೆ ರಾಜತಾಂತ್ರಿಕ ಸಮರ ಶುರುವಾಗಿದೆ.

ಆಕಸ್ಮಿಕವಾಗಿ ಗಡಿ ದಾಟಿ ಪಾಕ್ ​ನಿಂದ ಬಂಧಿಸಲ್ಪಟ್ಟಿದ್ದ ಯೋಧ ಭಾರತಕ್ಕೆ ವಾಪಸ್..! ಭಾರತಕ್ಕೆ ರಾಜತಾಂತ್ರಿಕ ಗೆಲುವು..!

ಮಾದಕ ವಸ್ತು​ ಸೇವನೆಗಾಗಿ 1 ಕೋಟಿ ರೂ. ಮೌಲ್ಯದ ಆಸ್ತಿಯನ್ನೇ ಮಾರಿದ ಆಸ್ಪತ್ರೆಯೊಂದರ ಮಾಜಿ CEO..! ಮಹಿಳೆ ಅರೆಸ್ಟ್..!

See also  ಇಸ್ರೇಲ್ ಗೆ ನುಸುಳಲು ಪ್ರಯತ್ನಸಿದ ಕೇರಳದ ವ್ಯಕ್ತಿಯನ್ನು ಗುಂಡಿಟ್ಟು ಕೊಂದ ಜೋರ್ಡಾನ್ ದೇಶದ ಸೇನೆ..! ಇಸ್ರೇಲ್ ನಲ್ಲಿ ಉದ್ಯೋಗ ಕೊಡಿಸುವ ಆಸೆ ತೋರಿಸಿ ಕರೆದೊಯ್ಯಿದಿದ್ದ ಟ್ರಾವೆಲ್ ಏಜೆನ್ಸಿ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget