Latestಕ್ರೈಂದೇಶ-ವಿದೇಶವಿಡಿಯೋವೈರಲ್ ನ್ಯೂಸ್

ಭಾರತದ ಸೇನಾ ಮಾಹಿತಿಯನ್ನು ಪಾಕಿಸ್ತಾನಕ್ಕೆ ನೀಡಿದ್ದ ಹರಿಯಾಣದ ಯೂಟ್ಯೂಬರ್‌ ಜ್ಯೋತಿ ಮಲ್ಹೋತ್ರಾ ಅರೆಸ್ಟ್..! ದಾಳಿಗೂ ಮುಂಚೆ ಪಹಲ್ಗಾಮ್ ಗೆ ಬಂದಿದ್ದ ಜ್ಯೋತಿ..!

1.2k

ನ್ಯೂಸ್‌ ನಾಟೌಟ್: ಪಾಕಿಸ್ತಾನ ಗುಪ್ತಚರ ಅಧಿಕಾರಿಗಳಿಗೆ ಭಾರತದ ಸೇನಾ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ನೀಡಿದ ಆರೋಪದಲ್ಲಿ ಬಂಧನಕ್ಕೆ ಒಳಗಾದ ಹರಿಯಾಣದ ಯೂಟ್ಯೂಬರ್‌ ಜ್ಯೋತಿ ಮಲ್ಹೋತ್ರಾ (Jyoti Malhotra) ಕಾಶ್ಮೀರದ ಪಹಲ್ಗಾಮ್‌ ಗೂ ತೆರಳಿದ್ದ ವಿಚಾರ ಈಗ ಬೆಳಕಿಗೆ ಬಂದಿದೆ.

ಜ್ಯೋತಿ ಇನ್‌ ಸ್ಟಾದಲ್ಲಿ ಜನವರಿ ತಿಂಗಳಿನಲ್ಲಿ ಪಹಲ್ಗಾಮ್‌ ಗೆ ತೆರಳಿದ್ದ ವಿಡಿಯೋ ಅಪ್ಲೋಡ್‌ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ಜ್ಯೋತಿ ವಿಡಿಯೋಗಳು ಈಗ ವೈರಲ್‌ ಆಗಿದೆ.
ಸರ್ಕಾರಿ ರಹಸ್ಯ ಕಾಯ್ದೆ ಮತ್ತು ಭಾರತೀಯ ನ್ಯಾಯಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಮೇ 16ರಂದು ಎಫ್‌ ಐಆರ್‌ ದಾಖಲಾಗಿದೆ. ನ್ಯಾಯಾಲಯ 5 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಿದೆ. ನೆಟ್ಟಿಗರು ಈಕೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಒಪ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.

 

ದೆಹಲಿಯಲ್ಲಿರುವ ಪಾಕಿಸ್ತಾನ ಹೈಕಮಿಷನ್‌ ಕಚೇರಿಯ ಸಿಬ್ಬಂದಿ ಎಹ್ಸಾನ್‌ ಉರ್‌ ರಹೀಮ್‌ ಅಲಿಯಾಸ್‌ ಡ್ಯಾನಿಷ್‌ ಜೊತೆ ಜ್ಯೋತಿ ಸಂಪರ್ಕ ಹೊಂದಿದ್ದಳು. ಭಾರತದ ಕುರಿತು ಬೇಹುಗಾರಿಕೆ ನಡೆಸುತ್ತಿದ್ದ ಆರೋಪದಲ್ಲಿ ಡ್ಯಾನಿಷ್‌ ನನ್ನು ಕೇಂದ್ರ ಸರ್ಕಾರವು ಇದೇ ಮೇ 13ರಂದು ಗಡೀಪಾರು ಮಾಡಿತ್ತು.

2023ರಲ್ಲಿ ಪಾಕ್‌ ಗೆ ಹೋಗಿದ್ದ ಜ್ಯೋತಿ ಪಾಕ್ ಡ್ಯಾನಿಶ್ ಜೊತೆ ನಿಕಟ ಸಂಬಂಧ ಬೆಳೆಸಿದ್ದಳು. ಅಲ್ಲದೇ ಪಾಕ್ ಗುಪ್ತಚರ ಏಜೆಂಟ್‌ ಗಳೊಂದಿಗೆ ಸಹ ಸಂಪರ್ಕ ಹೊಂದಿದ್ದಳು. ‘ಟ್ರಾವೆಲ್ ವಿತ್ ಜೋ’ ಯೂಟ್ಯೂಬ್ ನಡೆಸುತ್ತಿದ್ದ ಜ್ಯೋತಿ ತನ್ನ ಯೂಟ್ಯೂಬ್‌ ಚಾನಲ್‌ ನಲ್ಲಿ ಪಾಕಿಸ್ತಾನ ಪರ ಇರುವ ವಿಷಯಗಳನ್ನು ಅಪ್ಲೋಡ್‌ ಮಾಡುತ್ತಿದ್ದಳು. ಅಲ್ಲದೇ ವಾಟ್ಸಾಪ್, ಟೆಲಿಗ್ರಾಮ್ ಮತ್ತು ಸ್ನ್ಯಾಪ್‌ ಚಾಟ್‌ ನಂತಹ ಪ್ಲಾಟ್‌ ಫಾರ್ಮ್‌ಗಳಲ್ಲಿ ಶಕೀರ್ ಅಲಿಯಾಸ್ ರಾಣಾ ಶಹಬಾಜ್ ಸೇರಿದಂತೆ ಕಾರ್ಯಕರ್ತರೊಂದಿಗೆ ಸಂಪರ್ಕದಲ್ಲಿದ್ದ ವಿಚಾರ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಧರ್ಮಸ್ಥಳ ಮೂಲದ ಏರೋಸ್ಪೇಸ್ ಉದ್ಯೋಗಿ ಪಂಜಾಬ್ ನಲ್ಲಿ ನಿಗೂಢವಾಗಿ ಸಾವು..! ಪಂಜಾಬ್ ಗೆ ಪ್ರಯಾಣ ಬೆಳೆಸಿದ ಕುಟುಂಬಸ್ಥರು..!

ಇಟಲಿ ಪ್ರಧಾನಿಯನ್ನು ಮಂಡಿಯೂರಿ ಸ್ವಾಗತಿಸಿದ ಅಲ್ಬೇನಿಯಾ ದೇಶದ ಪ್ರಧಾನಿ..! ಇಲ್ಲಿದೆ ವಿಡಿಯೋ

ಇಸ್ರೋ ಇಂದು(ಮೇ.18) ಉಡಾವಣೆ ಮಾಡಿದ ಉಪಗ್ರಹ ಕಕ್ಷೆ ಸೇರುವಲ್ಲಿ ವಿಫಲ..! ಇಲ್ಲಿದೆ ಸಂಪೂರ್ಣ ಮಾಹಿತಿ

  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget