ನ್ಯೂಸ್ ನಾಟೌಟ್: ಭಾರತವು ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ. ಉಗ್ರರು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆಸಿದ ದಾಳಿಯಲ್ಲಿ 26 ಮಂದಿ ಪ್ರಾಣ ಕಳೆದುಕೊಂಡಿದ್ದರು. ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಹತ್ಯೆ ಮಾಡಲಾಗಿತ್ತು. ಉಗ್ರರು ಅಳಿಸಿದ್ದ ಹಿಂದೂ ಮಹಿಳೆಯರ ಕುಂಕುಮಕ್ಕೆ ಪ್ರತಿಯಾಗಿ ಭಾರತ ಪಾಕಿಸ್ತಾನದ ಮೇಲೆ ದಾಳಿ ನಡೆಸಿದೆ.
ಭಯೋತ್ಪಾದಕರನ್ನು ಗುರಿಯಾಗಿಸಿಕೊಂಡು ಭಾರತ ಈ ದಾಳಿ ನಡೆಸಿದೆ. ಭಾರತದ ಈ ದಾಳಿಯಲ್ಲಿ, ಉಗ್ರ ಹಫೀಜ್ ಸಯೀದ್ ಮತ್ತು ಮಸೂದ್ ಅಜರ್ ಕೂಡ ಸತ್ತಿದ್ದಾರೆಯೇ? ಭಾರತವು ಬಹಾವಲ್ಪುರದಲ್ಲಿರುವ ಮಸೂದ್ ಅಜರ್ ನ ಪ್ರಧಾನ ಕಚೇರಿಯನ್ನು ಗುರಿಯಾಗಿಸಿ ದಾಳಿ ನಡೆಸಿತ್ತು.
ದಾಳಿಯಲ್ಲಿ ಪ್ರಧಾನ ಕಚೇರಿ ಮತ್ತು ಮದರಸಾ ನಾಶವಾಗಿವೆ. ಪಾಕಿಸ್ತಾನದ ಮಾಧ್ಯಮಗಳು ಸ್ವತಃ ಇದನ್ನು ದೃಢಪಡಿಸಿವೆ. ಈ ದಾಳಿಯಲ್ಲಿ ಸುಮಾರು 50 ಜೈಶ್ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ.
ಇದಲ್ಲದೆ, ಭಾರತವು ಮುರಿಡ್ಕೆಯಲ್ಲಿರುವ ಲಷ್ಕರೆ ಅಡಗುತಾಣವನ್ನು ನಾಶಪಡಿಸಿದೆ. ಈ ದಾಳಿಯಲ್ಲಿ ಲಷ್ಕರ್ ಮತ್ತು ಜೈಶ್‌ನ ಅನೇಕ ಉನ್ನತ ಕಮಾಂಡರ್‌ಗಳು ಸಾವನ್ನಪ್ಪಿದ್ದಾರೆ. ಆದರೆ, ಈ ದಾಳಿಯಲ್ಲಿ ಮಸೂದ್ ಅಜರ್ ಮತ್ತು ಹಫೀಜ್ ಸಯೀದ್ ಸಾವನ್ನಪ್ಪಿದ ಬಗ್ಗೆ ಯಾವುದೇ ಮಾಹಿತಿ ಇಲ್ಲ.
ಭಾರತದ ದಾಳಿಯ ನಂತರ, ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ತುರ್ತು ಸಭೆ ಕರೆದಿದ್ದಾರೆ. ಪಾಕಿಸ್ತಾನದ ಪ್ರಧಾನಿ ದಾಳಿಯನ್ನು ದೃಢಪಡಿಸಿದ್ದಾರೆ. ಭಾರತ ನಮ್ಮ ಮೇಲೆ ಯುದ್ಧ ಹೇರಿದೆ ಎಂದು ಅವರು ಹೇಳಿದರು. ನಮಗೆ ಪ್ರತೀಕಾರ ತೀರಿಸಿಕೊಳ್ಳುವ ಹಕ್ಕಿದೆ ಎಂದಿದ್ದಾರೆ.
ಪಾಕ್ ಗೆ ನುಗ್ಗಿ ಹೊಡೆದ ಭಾರತ..! ಆಪರೇಷನ್ ಸಿಂಧೂರ್ ಗೆ 9 ಉಗ್ರರ ನೆಲೆಗಳು ಧ್ವಂಸ..! ಇಲ್ಲಿದೆ ಸಂಪೂರ್ಣ ಮಾಹಿತಿ