ನ್ಯೂಸ್ ನಾಟೌಟ್: ಇಂಡಿಯನ್ ಓವರ್‌ಸೀಸ್ ಬ್ಯಾಂಕ್ ನಲ್ಲಿ ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 400 ಹುದ್ದೆಗಳಿದ್ದು ಇಂದೇ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
ರಾಜ್ಯವಾರು ಹುದ್ದೆಗಳ ಸಂಖ್ಯೆಯನ್ನು ಪ್ರಕಟಿಸಲಾಗಿದ್ದು, ತಮಿಳುನಾಡು: 260, ಒಡಿಶಾ: 10, ಪಂಜಾಬ್: 21, ಪಶ್ಚಿಮ ಬಂಗಾಲ: 34, ಗುಜರಾತ್: 30, ಮಹಾರಾಷ್ಟ್ರ: 45 ಹುದ್ದೆಗಳು ಖಾಲಿ ಇವೆ. ಯಾವುದೇ ಅಧಿಕೃತ ವಿಶ್ವವಿದ್ಯಾನಿಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಒಬ್ಬರು ಒಂದು ರಾಜ್ಯದಿಂದ ಮಾತ್ರವೇ ಅರ್ಜಿ ಸಲ್ಲಿಸಬಹುದಾಗಿದ್ದು, ಆಯಾಯ ರಾಜ್ಯದ ಸ್ಥಳೀಯ ಭಾಷೆ ಓದಲು, ಬರೆಯಲು ಮತ್ತು ಮಾತನಾಡಲು ತಿಳಿದಿರಬೇಕು.
ವಯೋಮಿತಿ: ಕನಿಷ್ಠ 20 ವರ್ಷ. ಗರಿಷ್ಠ 30 ವರ್ಷ ಎನ್ನಲಾಗಿದೆ. ಮೀಸಲಾತಿಗೆ ಅನುಗುಣವಾಗಿ ಗರಿಷ್ಠ ವಯೋಮಿತಿಯಲ್ಲಿ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.
ಅರ್ಜಿ ಶುಲ್ಕ: ಸಾಮಾನ್ಯ, ಇಡಬ್ಲ್ಯುಎಸ್, ಒಬಿಸಿ ಅಭ್ಯರ್ಥಿಗಳಿಗೆ 850 ರೂ. ಹಾಗು ಎಸ್‌ಸಿ/ಎಸ್‌ಟಿ/ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ 175 ರೂ. ಇದೆ. ಆನ್‌ಲೈನ್ ಪರೀಕ್ಷೆ, ಭಾಷಾ ಪ್ರಾವೀಣ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ನಡೆಸಲಿದ್ದಾರೆ. ಅರ್ಜಿ ಸಲ್ಲಿಸಲು ಕೊನೇ ದಿನಾಂಕ: 30-5-25
ಅರ್ಜಿ ಸಲ್ಲಿಸಲು: https://ibpsonline.ibps.in/ioblboapr25/ ಗೆ ಭೇಟಿ ನೀಡಲು ತಿಳಿಸಲಾಗಿದೆ.