ಕರಾವಳಿಶಿಕ್ಷಣ

ಯಾವಾಗ ಪ್ರಕಟವಾಗಲಿದೆ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ? ಪ್ರಮುಖ ಮಾಹಿತಿ ಹಂಚಿಕೊಂಡ ಸಚಿವ ಬಿ.ಸಿ.‌ನಾಗೇಶ್

267

ನ್ಯೂಸ್ ನಾಟೌಟ್: ಈಗಾಗಲೆ ನಡೆಯುತ್ತಿರುವ ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶ ಪ್ರಕಟವಾಗುವ ದಿನಾಂಕದ ಕುರಿತು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ಮಾಹಿತಿ ಹಂಚಿಕೊಂಡಿದ್ದಾರೆ. ಮೇ ಮೊದಲ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದರು.

ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಇಂದು ಅಂದರೆ, ಮಾ.9 ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಸಚಿವರು ತಿಪಟೂರಿನ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಗುರುವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರ ತಿಳಿಸಿದರು.

‘ಒಟ್ಟು 5,716 ಕಾಲೇಜುಗಳಿಂದ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿದ್ದು, ಪರೀಕ್ಷೆಯಲ್ಲಿ ಅಕ್ರಮ ನಡೆಯದಂತೆ ಎಚ್ಚರವಹಿಸಲು 1,109 ಸಹ ಮುಖ್ಯ ಅಧೀಕ್ಷಕರು, 64 ಜಿಲ್ಲಾ ಜಾಗೃತ ದಳ, 525 ತಾಲೂಕು ಜಾಗೃತ ದಳ ಮತ್ತು 2373 ವಿಶೇಷ ಜಾಗೃತ ದಳಗಳನ್ನು ನೇಮಿಸಲಾಗಿದೆ ಎಂದರು.

ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಪರೀಕ್ಷೆ ನಡೆಸಲಾಗುವುದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದರು.

See also  ಕನ್ನಡ ಸಿನಿಮಾ ಜಪಾನ್ ನಲ್ಲಿ ಬಿಡುಗಡೆ, ‘777 ಚಾರ್ಲಿ’ ಗೆ ರಷ್ಯಾ, ಲ್ಯಾಟಿನ್ ಅಮೆರಿಕ, ಜರ್ಮನಿ, ತೈವಾನ್ ನಲ್ಲೂ ಬೇಡಿಕೆ
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget