ಕ್ರೈಂ

ಏಳರ ಹರೆಯದ ಬಾಲಕನ ಪ್ರಾಣ ತೆಗೆದ ಇಂಜೆಕ್ಷನ್ ..! ವೈದ್ಯರ ಎಡವಟ್ಟಿಗೆ ಪುಟ್ಟ ಕಂದಮ್ಮ ಬಲಿ

ನ್ಯೂಸ್‌ ನಾಟೌಟ್‌: ವೈದ್ಯಕೀಯ ಕ್ಷೇತ್ರ ಎಷ್ಟೊಂದು ಅಭಿವೃದ್ಧಿಯಾದರೂ ಕೆಲವೊಮ್ಮೆ ಸ್ವಲ್ಪ ಎಚ್ಚರ ತಪ್ಪಿದರೂ ಮಹಾ ಅನಾಹುತವೇ ಸಂಭವಿಸುತ್ತದೆ. ಇಂಥದೊಂದು ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪಟ್ಟಣದಲ್ಲಿ ನಡೆದಿದೆ.

ತೀವ್ರ ಜ್ವರದಿಂದ ಬಳಲುತ್ತಿದ್ದ ಏಳು ವರ್ಷದ ಬಾಲಕನಿಗೆ ಇಲ್ಲಿನ ಖಾಸಗಿ ಕ್ಲಿನಿಕ್ ವೈದ್ಯರು ನೀಡಿದ ಇಂಜೆಕ್ಷನ್​ನಿಂದ ಬಾಲಕ ಮೃತಪಟ್ಟಿದ್ದಾನೆ. ಅಜ್ಜಂಪುರ ಸಮೀಪದ ಕೆಂಚಾಪುರ ಗ್ರಾಮದ ಅಶೋಕ್ ಅವರ 7 ವರ್ಷದ ಮಗ ಸೋನೇಶ್ ಕಳೆದ ನಾಲ್ಕು ದಿನಗಳ ಹಿಂದೆ ತೀವ್ರ ಜ್ವರದಿಂದ ಬಳಲುತ್ತಿದ್ದ. ಪೋಷಕರು ಸೋನೇಶ್ ನನ್ನು ಅಜ್ಜಂಪುರ ಪಟ್ಟಣದ ಖಾಸಗಿ ಕ್ಲಿನಿಕ್ ವೈದ್ಯ ವರುಣ್ ಬಳಿ ಸೆಪ್ಟೆಂಬರ್ 24 ರಂದು ಚಿಕಿತ್ಸೆಗಾಗಿ ಕರೆದೊಯ್ದಿದ್ದರು. ವೈದ್ಯ ವರುಣ್, ಬಾಲಕನ ಸೊಂಟಕ್ಕೆ ‌ಇಂಜೆಕ್ಷನ್ ಮಾಡಿದ್ದು ಇದೆ ಇಂಜೆಕ್ಷನ್ ಓವರ್ ಡೋಸ್ ಆಗಿ ಬಾಲಕನ ಜೀವವನ್ನೇ ತೆಗೆದಿದೆ.

ವೈದ್ಯ ವರುಣ್ ನೀಡಿದ ಓವರ್ ಡೋಸ್ ಇಂಜೆಕ್ಷನ್ ನಿಂದ ಬಾಲಕನ ಸೊಂಟದ ಭಾಗದಲ್ಲಿ ಬೊಬ್ಬೆಗಳು ಕಾಣಿಸಿಕೊಂಡಿದ್ದವು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ‌ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದರೂ ಚಿಕಿತ್ಸೆಗೆ ಸ್ಪಂದಿಸದೆ ಬಾಲಕ ಸೋನೇಶ್ ಮೃತಪಟ್ಟಿದ್ದಾರೆ. ಶವ ಪರೀಕ್ಷೆಗಾಗಿ ಶಿವಮೊಗ್ಗದ ಮೆಗ್ಗಾನ್ ಸರ್ಕಾರಿ ಆಸ್ಪತ್ರೆಗೆ ಬಾಲಕನ ಮೃತದೇಹವನ್ನು ರವಾನೆ ಮಾಡಲಾಗಿದೆ. ಈ ಸಂಬಂಧ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ವೈದ್ಯ ಡಾ. ವರುಣ್ ವಿರುದ್ಧ ಪ್ರಕರಣ ದಾಖಲಾಗಿದೆ. ತನಿಖೆ ನಡೆಯುತ್ತಿದೆ.

Related posts

ರಾತ್ರಿ ಉಗ್ರರು ಮತ್ತು ಸೇನೆಯ ನಡುವೆ ಅರಣ್ಯದಲ್ಲಿ ಗುಂಡಿನ ಚಕಮಕಿ..! ಸೇನಾಧಿಕಾರಿ ಸೇರಿ 4 ಯೋಧರು ಹುತಾತ್ಮ..!

29ನೇ ಮಹಡಿಯಿಂದ ಹಾರಿದ 12 ರ ಬಾಲಕಿ..! 6 ನೇ ತರಗತಿಯ ಬಾಲಕಿಯ ನಿಗೂಢ ಸಾವಿಗೆ ಕಾರಣವೇನು..?

ದೆಹಲಿ ಸಿಎಂ ಮತ್ತೆ ತಿಹಾರ್‌ ಜೈಲಿಗೆ..! ಜಾಮೀನು ವಿಸ್ತರಣೆಯ ಅರ್ಜಿ ತಿರಸ್ಕರಿಸಿದ ಕೋರ್ಟ್..!