Latestಕ್ರೈಂಬೆಂಗಳೂರುರಾಜ್ಯವೈರಲ್ ನ್ಯೂಸ್

ಇನ್‌ ಸ್ಟಾಗ್ರಾಮ್ ನಲ್ಲಿ ಲವ್ ಆದವನ ಜೊತೆ ಎರಡನೇ ಮದುವೆಯಾದ ಮಹಿಳೆ.! ಮದುವೆಯ ವಿಡಿಯೋ ನೋಡಿ ಪತಿಗೆ ಶಾಕ್..!

1.4k

ನ್ಯೂಸ್ ನಾಟೌಟ್: ಮದುವೆಯಾಗಿ 13 ವರ್ಷದ ನಂತರ ಇನ್‌ ಸ್ಟಾಗ್ರಾಮ್ ಪರಿಚಯವಾದವನೊಂದಿಗೆ ಪತ್ನಿ ಎಸ್ಕೇಪ್ ಆಗಿ, ಎರಡನೇ ಮದುವೆಯಾಗಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ನಡೆದಿದೆ.

ನೇತ್ರಾವತಿ ಎಂಬಾಕೆ ಜಕ್ಕಸಂದ್ರದ ರಾಘವೇಂದ್ರ ನಗರ ನಿವಾಸಿಯಾದ ರಮೇಶ್ ಎಂಬುವರನ್ನು ಮದುವೆಯಾಗಿ 13 ವರ್ಷವಾಗಿತ್ತು. ಒಬ್ಬ ಮಗ ಕೂಡ ಇದ್ದಾನೆ.

ಕಳೆದ 1 ವಾರದ ಹಿಂದೆ ಇನ್‌ ಸ್ಟಾದಲ್ಲಿ ನೇತ್ರಾವತಿಗೆ ಸಂತೋಷ್ ಎಂಬಾತನ ಪರಿಚಯವಾಗಿತ್ತು. ಈ ಪರಿಚಯವು ಪ್ರೀತಿಗೆ ತಿರುಗಿತ್ತು. ನೇತ್ರಾವತಿಯು ಕೆಲವೇ ದಿನಗಳ ಪ್ರೀತಿಗಾಗಿ ಮೊದಲ ಪತಿಗೆ ಕೈಕೊಟ್ಟು, ಸಂತೋಷ್ ಜೊತೆ ದೇವಾಲಯಲ್ಲಿ ಎರಡನೇ ಮದುವೆಯಾಗಿದ್ದಾಳೆ. ಸಾಮಾಜಿಕ ಜಾಲತಾಣದಲ್ಲಿ ಈ ಮದುವೆಯ ವಿಡಿಯೋವನ್ನು ನೋಡಿ ಮೊದಲ ಪತಿ ಶಾಕ್ ಆಗಿದ್ದಾರೆ.

ಪೊಲೀಸರ ಭದ್ರತೆಯಲ್ಲಿ ಬಟ್ಟೆ ಹಾಗೂ ಇನ್ನಿತರ ವಸ್ತುಗಳನ್ನ ತೆಗೆದುಕೊಂಡು ಹೋಗಲು ಮನೆ ಬಳಿ ಬಂದ ನೇತ್ರಾವತಿಗೆ ಸ್ಥಳೀಯರು ಕ್ಲಾಸ್ ತೆಗೆದುಕೊಂಡಿದ್ದಾರೆ.
ನೇತ್ರಾವತಿ ವಿರುದ್ಧ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತಿ ಹಾಗೂ ಆತನ ಕುಟುಂಬ ದೂರು ನೀಡಿ ಆಕ್ರೋಶ ಹೊರಹಾಕಿದ್ದಾರೆ.

ರೈಲ್ವೆ ಹಳಿ ಮೇಲೆ ಮಲಗಿ ರೀಲ್ಸ್ ಮಾಡಲು ಹೋದವ ಬದುಕಿದ್ದೇ ಪವಾಡ..! ಯುವಕ ಅರೆಸ್ಟ್, ಇಲ್ಲಿದೆ ವಿಡಿಯೋ

See also  ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಹಲ್ಲೆ ಯತ್ನ ಆರೋಪ; ಉದ್ಯಮಿ ಶ್ರೀನಿವಾಸ್ ನಾಯ್ಡು ವಿರುದ್ಧ ದೂರು ದಾಖಲು
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget