ಕ್ರೈಂ

ಸ್ನೇಹಿತರೊಂದಿಗೆ ಮೈಸೂರು ದಸರಾ ನೋಡಿಕೊಂಡು ಬಂದಿದ್ದ ಅಂತಾರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ಆತ್ಮಹತ್ಯೆ..!,ಮನೆಯಲ್ಲಿ ತಂದೆ , ಸಹೋದರರಿರುವಾಗಲೇ ಕೃತ್ಯ..!

ನ್ಯೂಸ್ ನಾಟೌಟ್ :ಸ್ನೇಹಿತರೊಂದಿಗೆ ಮೈಸೂರು ದಸರಾ ನೋಡಿಕೊಂಡು ಬಂದಿದ್ದ  ಅಂತಾರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಅರಿಶಿನಕುಂಟೆ ಆದರ್ಶನಗರದ ನಿವಾಸದಲ್ಲಿ ಧನಲಕ್ಷ್ಮೀ(25) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಧನಲಕ್ಷ್ಮೀಯವರು ಮನೆಯ ರೂಂನಲ್ಲಿ ಈ ಕೃತ್ಯವೆಸಗಿದ್ದಾರೆಂದು ತಿಳಿದು ಬಂದಿದೆ.ಮನೆಯಲ್ಲಿ ಧನಲಕ್ಷ್ಮೀಯವರ ತಂದೆ ಹಾಗೂ ಸಹೋದರ ಇದ್ದರು.ಈ ವೇಳೆಯೇ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.ಅನುಮಾನಗೊಂಡ ತಂದೆ ರೂಮ್‍ಗೆ ಹೋಗಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.ಧನಲಕ್ಷ್ಮೀಯವರು ಮೂಲತಃ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕೆ.ತಿಮ್ಮಲಾಪುರ ನಿವಾಸಿ ಎಂದು ತಿಳಿದು ಬಂದಿದೆ.ಕಳೆದ 5 ವರ್ಷದಿಂದ ನೆಲಮಂಗಲದ ಅರಿಶಿನಕುಂಟೆಯ ಆದರ್ಶನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಇವರು ಅಂತಾರಾಷ್ಟ್ರೀಯ ಮಟ್ಟದಲ್ಲಿ 3 ಬಾರಿ ಕಬಡ್ಡಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಅದಲ್ಲದೇ ಕಾಡುಗೋಡಿಯ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.ಮೊನ್ನೆಯಷ್ಟೇ ಸ್ನೇಹಿತರ ಜತೆಗೆ ಮೈಸೂರು ದಸರಾ ನೋಡಿಕೊಂಡು ಬಂದಿದ್ದ ಧನಲಕ್ಷ್ಮೀಯವರು ಮನೆಗೆ ಬಂದು ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇವರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೋಷಕರು ನೀಡಿದ ದೂರಿನ ಮೇರೆಗೆ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ತನ್ನ ಜೀವನವನ್ನೇ ಕತ್ತಲನ್ನಾಗಿಸಿದ ಸುಳ್ಯದ ಮಹಿಳೆ,ಉದ್ಯಮಿಯೊಬ್ಬರ ಪತ್ನಿಯ ಈ ನಿರ್ಧಾರಕ್ಕೆ ಕಾರಣವೇನು?

https://www.youtube.com/watch?v=mtKTEHG9O4I

Related posts

ಎಣ್ಣೆ ಏಟಲ್ಲಿ ಬಾಂಬನ್ನೇ ಕಚ್ಚಿದ ಭೂಪ..! ಹೆಂಡತಿ ಮನೆ ಬಿಟ್ಟು ಹೋದ ಮೇಲೆ ನಡೆಯಿತು ಅನಾಹುತ! ಮುಂದೇನಾಯ್ತು..?

ಶಿಷ್ಟಾಚಾರ ಉಲ್ಲಂಘಿಸಿದ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇಗುಲ ಸಿಬ್ಬಂದಿ ಅಮಾನತು! ಕಮಿಷನರ್ ಗೆ ದೂರು!

ಜ.1 ರಿಂದ ಹಲವು ಬಳಕೆದಾರರ ಗೂಗಲ್ ಪೇ, ಫೋನ್ ಖಾತೆಗಳನ್ನು ನಿಷ್ಕ್ರೀಯಗೊಳಿಸಲಿದೆಯಾ ಸರ್ಕಾರ? ಸ್ಥಗಿತಗೊಂಡ ಸಿಮ್‌ ಸಂಖ್ಯೆಯನ್ನು ಎಷ್ಟು ದಿನಗಳ ಬಳಿಕ ಇನ್ನೊಬ್ಬರಿಗೆ ನೀಡಲಾಗುತ್ತದೆ ಗೊತ್ತಾ..?