ಬೆಂಗಳೂರುರಾಜಕೀಯ

ಕಾಂಗ್ರೆಸ್‌ ಮುಖಂಡನ ಮನೆ ಮೇಲೆ ಐಟಿ ದಾಳಿ: 2. 85 ಕೋಟಿ ರೂ. ವಶ

ನ್ಯೂಸ್‌ ನಾಟೌಟ್‌:  ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕಾಂಗ್ರೆಸ್ ಮುಖಂಡ ಚನ್ನಬಸಪ್ಪ ಹುಲ್ಲತ್ತಿ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಅಪಾರ ಪ್ರಮಾಣ ಹಣವನ್ನು ವಶಕ್ಕೆ ಪಡೆದಿದ್ದಾರೆ.

ಮತದಾನದ ದಿನ ಸಮೀಪಿಸುತ್ತಿರುವ ನಡುವೆ ಕೆಲವು ಮುಖಂಡರ ಮೇಲೆ ಆದಾಯ ತೆರಿಗೆ ಇಲಾಖೆ (ಐಟಿ) ದಾಳಿ ನಡೆಸಿದೆ. ಚನ್ನಬಸಪ್ಪ ಹುಲ್ಲತ್ತಿ ಅವರ ಮನೆಯ ಮೇಲೆ ಇಂದು ದಾಳಿ ನಡೆಸಲಾಗಿದೆ. ಮುಂಜಾನೆಯೇ ಕಾರ್ಯಾಚರಣೆ ನಡೆಸಿರುವ ತೆರಿಗೆ ಅಧಿಕಾರಿಗಳು ಶೋಧಕಾರ್ಯ ಮುಗಿಸಿ ಹಲವು ದಾಖಲೆ ಹಾಗೂ ಅಪಾರ ಪ್ರಮಾಣದ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬ್ಯಾಡಗಿ ಪಟ್ಟಣದ ವಿದ್ಯಾನಗರದಲ್ಲಿರುವ ಚನ್ನಬಸಪ್ಪ ಮನೆಯಲ್ಲಿ ಒಟ್ಟು 2 ಕೋಟಿ 85 ಲಕ್ಷ ರೂಪಾಯಿ ಪತ್ತೆಯಾಗಿದೆ ಎನ್ನಲಾಗಿದೆ. ಚನ್ನಬಸಪ್ಪ ಹುಲ್ಲತ್ತಿ ಈ ಹಿಂದೆ ಎಪಿಎಂಸಿ ಸಮಿತಿ ಅಧ್ಯಕ್ಷರಾಗಿದ್ದರು. ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿವಾಸವಿದೆ.

Related posts

ಬೆಂಗಳೂರಿನಲ್ಲಿ ವಿಚಿತ್ರ ದರೋಡೆ ದಂಧೆ, ರಾತ್ರಿ ವೇಳೆ ಒಂಟಿ ವಾಹನ ಚಾಲಕರೇ ಇವರ ಟಾರ್ಗೆಟ್! – ವಿಡಿಯೋ ನೋಡಿ

ಯಮುನಾ ನದಿಯಲ್ಲಿ ಡಾ.ಮನಮೋಹನ್ ಸಿಂಗ್ ಚಿತಾಭಸ್ಮ ವಿಸರ್ಜನೆ, ಈ ನಡುವೆ ಏನಿದು ವಿವಾದ..?

ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಇಟ್ಟವನು ತೀರ್ಥಹಳ್ಳಿ ವ್ಯಕ್ತಿಯೇ?ಈ ಪ್ರಕರಣಕ್ಕೂ ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟಕ್ಕೂ ಸಾಮ್ಯತೆ ಇದೆಯಾ?