Latestಕ್ರೈಂರಾಜ್ಯವೈರಲ್ ನ್ಯೂಸ್

ಜೈಲಿನಲ್ಲಿ ನಿತ್ಯ ಒಂದೊಂದು ಸೌಲಭ್ಯ ನೀಡುವಂತೆ ಹರ್ಷ ಕೊಲೆ ಆರೋಪಿಗಳಿಂದ ಡಿಮ್ಯಾಂಡ್..! ಈ ಹಿಂದೆಯೂ ಕಿರಿಕ್ ಮಾಡಿ ಬೆಂಗಳೂರು, ಗುಲ್ಬರ್ಗ, ಧಾರವಾಡ ಜೈಲಿಗೆ ಸ್ಥಳಾಂತರವಾಗಿದ್ದ ಆರೋಪಿಗಳು..!

783

ನ್ಯೂಸ್ ನಾಟೌಟ್ : ಶಿವಮೊಗ್ಗದ ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗಳು ಬಳ್ಳಾರಿ ಜೈಲಿನಲ್ಲಿ ಕಿರಿಕ್ ಮಾಡುತ್ತಿದ್ದಾರೆ ಎಂದು ವರದಿ ತಿಳಿಸಿದೆ.

ಹರ್ಷ ಕೊಲೆ ಪ್ರಕರಣದ ಹತ್ತು ಜನ ಆರೋಪಿಗಳ ಪೈಕಿ ಜಿಲಾನ್ ಹಾಗೂ ಸೈಯ್ಯದ್ ನಿಹಾಲ್ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿದ್ದಾರೆ. ಈ ಇಬ್ಬರೂ ಜೈಲಿನ ಸಿಬ್ಬಂದಿ, ಅಧಿಕಾರಿಗಳ ಜೊತೆ ನಿತ್ಯ ಜಗಳ ಮಾಡಿ ಅವಾಜ್ ಹಾಕಿ, ಕಿರಿಕ್ ಮಾಡುತ್ತಿದ್ದಾರೆ ಎನ್ನಲಾಗಿದೆ.

ನಿತ್ಯ ಒಂದೊಂದು ಸೌಲಭ್ಯ ಕೇಳಿ ಜೈಲು ಸಿಬ್ಬಂದಿಗೆ ಧಮ್ಕಿ ಹಾಕುತ್ತಿದ್ದಾರೆ. ಜೈಲಿನಲ್ಲಿ ನಡೆದ ಹಳೆ ಘಟನೆಗಳ ವೀಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಹೇಳುತ್ತಿದ್ದಾರೆ. ಪ್ರತ್ಯೇಕ ಕೊಠಡಿ ಕೊಡಿ, ವಿಶೇಷ ಸೌಲಭ್ಯ ನೀಡಿ ಎಂದು ಇಬ್ಬರು ಗಲಾಟೆ ಮಾಡುತ್ತಿದ್ದಾರೆ.

ಜೈಲಿನಲ್ಲಿ ಬೇರೇ ಬೇರೆ ಕೋಣೆಗೆ ಅಥವಾ ಜೈಲರ್ ಕೊಠಡಿಗೆ ಹೋಗುವಾಗ ಕಡ್ಡಾಯವಾಗಿ ಚೆಕಪ್ ಮಾಡಲಾಗುತ್ತದೆ. ಆದರೆ ನಮ್ಮನ್ನು ನೀವು ಪರಿಶೀಲನೆ ಮಾಡಬೇಡಿ ಎಂದು ಹೇಳುತ್ತಿದ್ದಾರೆ. ಅಷ್ಟೇ ಅಲ್ಲದೇ ಸಣ್ಣ ಪುಟ್ಟ ವಿಚಾರಕ್ಕೂ ಜೈಲು ಸಿಬ್ಬಂದಿಯನ್ನು ಆರೋಪಿಗಳು ನಿಂದಿಸುತ್ತಿದ್ದಾರೆ ಎನ್ನಲಾಗಿದೆ.
ಆರೋಪಿಗಳು ಇದೇ ರೀತಿ ಕಿರಿಕ್ ಮಾಡಿ ಬೆಂಗಳೂರು, ಗುಲ್ಬರ್ಗ, ಧಾರವಾಡ ಜೈಲಿಗೆ ಹೋಗಿದ್ದರು. ಈಗ ಅದೇ ಚಾಳಿಯನ್ನು ಬಳ್ಳಾರಿ ಜೈಲಿನಲ್ಲೂ ಮುಂದುವರಿಸುತ್ತಿದ್ದಾರೆ.

1 ಕೋಟಿ ರೂ. ಲಾಟರಿ ಗೆದ್ದ ಭಯದಲ್ಲಿ ರಾತ್ರೋರಾತ್ರಿ ವೃದ್ಧ ತಾಯಿಯನ್ನು ಬಿಟ್ಟು ಊರು ತೊರೆದ ಕುಟುಂಬ..! ಮುಂದೇನಾಯ್ತು..?

See also  ಹಸುವಿನ ಹಾಲು ಕುಡಿದು ಸಾವನ್ನಪ್ಪಿದ ಮಹಿಳೆ! ಕಾರಣ ಕೇಳಿದ್ರೆ ನೀವು ಶಾಕ್‌ ಆಗ್ತೀರಾ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget