ಕರಾವಳಿಕ್ರೈಂವೈರಲ್ ನ್ಯೂಸ್

ಜೈಲಿನಿಂದ ಮುರುಘಾಶ್ರೀ ಬಿಡುಗಡೆಗೆ ​ಆದೇಶ..! 12 ಸಾಕ್ಷಿಗಳ ವಿಚಾರಣೆ ಮುಕ್ತಾಯ..!

ನ್ಯೂಸ್ ನಾಟೌಟ್: ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗ ಮುರುಘಾಶ್ರೀ ಬಿಡುಗಡೆಗೆ ನ್ಯಾಯಾಲಯ ಆದೇಶ ಹೊರಡಿಸಿದೆ. ಸಾಕ್ಷ್ಯಗಳ ವಿಚಾರಣೆ ಬಹುತೇಕ ಪೂರ್ಣಗೊಂಡ ಹಿನ್ನೆಲೆಯಲ್ಲಿ ಚಿತ್ರದುರ್ಗದ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಈ ಆದೇಶವನ್ನು ಹೊರಡಿಸಿದೆ.

ಈ ಹಿಂದೆ ಹೈಕೋರ್ಟ್ ಮುರುಘಾಶ್ರೀಗೆ ಜಾಮೀನು ನೀಡಿತ್ತು. ಆದರೆ, ಸಾಕ್ಷ ವಿಚಾರಣೆ ನಡೆಸುವವರೆಗೆ ಬಂಧನದಲ್ಲಿಡಲು ಸುಪ್ರೀಂಕೋರ್ಟ್​ ಆದೇಶಿಸಿತ್ತು. ಇದೀಗ, ಸಂತ್ರಸ್ತೆಯರಿಬ್ಬರು ಸೇರಿದಂತೆ 12 ಸಾಕ್ಷಿಗಳ ವಿಚಾರಣೆ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್​ ಜಾಮೀನಿನ ಆದೇಶದ ಪ್ರಕಾರ ಮುರುಘಾಶ್ರೀ ಬಿಡುಗಡೆಯಾಗಿದ್ದಾರೆ.

ಆದೇಶದ ಪ್ರತಿ ಜಿಲ್ಲಾ ಕಾರಾಗೃಹ ಅಧಿಕಾರಿಗಳ ಕೈ ಸೇರಿದ ಬಳಿಕ ತಲುಪಿದ ಬಳಿಕ ಬಿಡುಗಡೆ ಮುರುಘಾಶ್ರೀ ಜೈಲಿನಿಂದ ಹೊರಗೆ ಬರಲಿದ್ದಾರೆ. ಹೊರಬಂದ ಬಳಿಕ ಶ್ರೀಗಳು ದಾವಣಗೆರೆಯ ಶಿವಯೋಗಿ ಮಂದಿರಕ್ಕೆ ತೆರಳಲಿದ್ದಾರೆ. ಫೋಕ್ಸೋ ಪ್ರಕರಣದಲ್ಲಿ ಹೈಕೋರ್ಟ್ ಜಾಮೀನು ನೀಡಿತ್ತು. ಜಾಮೀನು ರದ್ದು ಕೋರಿ ಸಂತ್ರಸ್ತೆ ಪರವಾಗಿ ಅರ್ಜಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಮುರುಘಾಶ್ರೀ ಅವರ ಜಾಮೀನು ರದ್ದುಗೊಳಿಸಿತ್ತು. ಸಾಕ್ಷಗಳ ವಿಚಾರಣೆ ಮುಗಿಯುವವರೆಗೆ ಮುರುಘಾಶ್ರೀ ಬಂಧನದಲ್ಲಿರಲು ಸುಪ್ರೀಂಕೋರ್ಟ್​ ಸೂಚಿಸಿತ್ತು. ಇಂದಿಗೆ 13 ಮುಖ್ಯ ಸಾಕ್ಷಗಳ ವಿಚಾರಣೆ ಮುಗಿದಿದೆ. ಈ ಹಿನ್ನೆಲೆಯಲ್ಲಿ ಮುರುಘಾಶ್ರೀ ಅವರ ಬಿಡುಗಡೆಗೆ ನ್ಯಾಯಾಲಯ ಆದೇಶ ನೀಡಿದೆ ಎಂದು ಮುರುಘಾಶ್ರೀ ಪರ ವಕೀಲ ಕೆ. ವಿಶ್ವನಾಥಯ್ಯ ಹೇಳಿದ್ದಾರೆ.

Click

https://newsnotout.com/2024/10/mangaluru-kannada-news-mumthaj-ali-kannada-news-fir-kannada-news/
https://newsnotout.com/2024/10/viral-video-school-students-kannada-news-viral-news-issue/

Related posts

ರಷ್ಯಾದ 8 ವರ್ಷದ ಬಾಲಕನಿಗೆ ಭಾರತದಲ್ಲಿ ಇಷ್ಟಲಿಂಗ ದೀಕ್ಷೆ..! ‘ಆ್ಯಂಡ್ರೆ’ ಗಣೇಶನಾಗಿ ಬದಲಾದದ್ದೇಕೆ?

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಎಸ್ಕೇಪ್ ಆಗಿದ್ದ ಶಿಕ್ಷಕ ಪುತ್ತೂರು ನ್ಯಾಯಾಲಯಕ್ಕೆ ಹಾಜರು

ಸಿಎಂ ಕಚೇರಿಯ ಅಧಿಕಾರಿಗಳ ಕಟ್ಟಡಕ್ಕೆ ಬೆಂಕಿ..! ಕಚೇರಿಯಲ್ಲಿದ್ದ ಕಡತಗಳು ಭಸ್ಮ..!