Latestಕ್ರೈಂಬೆಂಗಳೂರುವೈರಲ್ ನ್ಯೂಸ್

ನಿನ್ನೆ ಜೈಲು ಸೇರಿದ್ದ ರಜತ್‌ ಗೆ ಇಂದು(ಎ.17) ಜಾಮೀನು..! 14 ದಿನಗಳ ನ್ಯಾಯಾಂಗ ಬಂಧನದಿಂದ ಪಾರು.?

389

ನ್ಯೂಸ್ ನಾಟೌಟ್: ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣದಲ್ಲಿ ‘ಬಿಗ್ ಬಾಸ್’ ರಜತ್‌ ಗೆ 24ನೇ ಎಸಿಎಂಎಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ನಿನ್ನೆ ನ್ಯಾಯಾಂಗ ಬಂಧನಕ್ಕೆ ಕಳಹಿಸಿದ್ದ 24ನೇ ಎಸಿಎಂಎಂ ನ್ಯಾಯಾಲಯ ಇಂದು(ಎ.17) ರಜಜತ್‌ ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ರೀಲ್ಸ್ ಕೇಸ್‌ ಗೆ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ರಜತ್‌ ಗೆ 2 ಬಾರಿ ಪೊಲೀಸರು ನೋಟಿಸ್ ನೀಡಿದ್ದರು. ವಿಚಾರಣೆಗೆ ಹಾಜರಾಗದ ರಜತ್‌ ನನ್ನು ಬಸವೇಶ್ವರನಗರ ಪೊಲೀಸರು ಬಂಧಿಸಿ ನಿನ್ನೆ (ಏ.16) ಕೋರ್ಟ್ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿತ್ತು. ಈ ಆದೇಶದ ಅನ್ವಯ ರಜತ್ ಏ.29ರವರೆಗೆ ಪರಪ್ಪನ ಅಗ್ರಹಾರದಲ್ಲಿ ಇರಬೇಕಿತ್ತು.

ರೀಲ್ಸ್‌ ಗೆ ಬಳಸಿದ್ದ ಮಚ್ಚು ಸಿಗದ ಹಿನ್ನೆಲೆ 2 ಬಾರಿ ನೋಟಿಸ್ ನೀಡಲಾಗಿತ್ತು. ಆದರೆ ಪೊಲೀಸ್ ವಿಚಾರಣೆಗೆ ಗೈರಾಗಿದ್ದಕ್ಕೆ ಅಸಮಾಧಾನಗೊಂಡಿದ್ದ ಕೋರ್ಟ್ ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಿತ್ತು.

ಅನಿರ್ದಿಷ್ಟಾವಧಿ ಮುಷ್ಕರ ಹಿಂಪಡೆದ ಲಾರಿ ಮಾಲಕರು..! ​ ಸಚಿವ ರಾಮಲಿಂಗಾರೆಡ್ಡಿಯ ಸಂಧಾನ ಸಭೆ ಯಶಸ್ವಿ​

See also  ಪುಸ್ತಕ ಮಾರುತ್ತಾ ಬಂದ ಬಾಲಕ ಖ್ಯಾತ ನಟಿಯ ಕೈಯಲ್ಲಿದ್ದ ಹಣ ಕಸಿದು ಪರಾರಿ..! 8 ವರ್ಷದ ಬಾಲಕನ ಬಗ್ಗೆ ನಟಿ ಹೇಳಿದ್ದೇನು..?
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget