ಕ್ರೈಂದೇಶ-ವಿದೇಶರಾಜಕೀಯರಾಜ್ಯ

ಸಿದ್ದರಾಮಯ್ಯ ಕೇಸ್ ಸಂಬಂಧ ಜಮೀರ್ ಅಹ್ಮದ್ ಖಾನ್ ಗೂ ಸಂಕಷ್ಟ..! ಸಚಿವನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರ ಸೂಚನೆ

ನ್ಯೂಸ್ ನಾಟೌಟ್: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಸಿಎಂ ಸಿದ್ದರಾಮಯ್ಯಗೆ ಶಾಕ್ ನೀಡಿದ್ದ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇದೀಗ ಅವರ ಆಪ್ತ ಸಚಿವ ಜಮೀರ್ ಅಹ್ಮದ್ ಖಾನ್ ಗೂ ಸಂಕಷ್ಟ ಎದುರಾಗಿದೆ.

ಮುಡಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​ ಆದೇಶದ ಬಗ್ಗೆ ವಿವಾದಾತ್ಮಕವಾಗಿ ಮಾತನಾಡಿದ್ದ ಸಚಿವ ಜಮೀರ್ ಅಹಮ್ಮದ್ ಖಾನ್ ಇದೀಗ ಕಾನೂನು ಕ್ರಮ ಎದುರಿಸಬೇಕಾಗಿದೆ.

ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್‌ ನೀಡಿದ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಜಮೀರ್‌ ಅಹ್ಮದ್‌ ಖಾನ್‌ ನ್ಯಾಯಾಂಗ ನಿಂದನೆ ಆರೋಪ ಎದುರಿಸುತ್ತಿದ್ದಾರೆ.
ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯಾಪಾಲರ ಥಾವರ್ ಚೆಂದ್ ಗೆಹ್ಲೋಟ್ ಸರ್ಕಾರದ ಅಡ್ವೋಕೇಟ್ ಜನರಲ್ ಗೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಮ್ ದೂರಿನ ಮೇರೆಗೆ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ಸಂಬಂಧ ಅಡ್ವೋಕೇಟ್ ಜನರಲ್‌ ಗೆ ರಾಜ್ಯಪಾಲರು ಪತ್ರ ಬರೆದಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

Click

https://newsnotout.com/2024/11/gps-kannada-news-eagle-viral-news-karavara-case/
https://newsnotout.com/2024/11/ksrtc-kananda-news-google-pay-phone-pay-viral-news/

Related posts

ಹೆದ್ದಾರಿ ಗುಂಡಿಗೆ ಅಮಾಯಕ ಬಲಿ, ನೋಡನೋಡುತ್ತಿದ್ದಂತೆ ಬೈಕ್ ಸವಾರನ ಮೇಲೆ ಹರಿದ ಲಾರಿ..!

ದಕ್ಷಿಣ ಕನ್ನಡ: ವಿವಾದ ಸೃಷ್ಟಿಸಿದ ಶಿಕ್ಷಣ ಇಲಾಖೆ ಸುತ್ತೋಲೆ..! ಗಣೇಶೋತ್ಸವ, ಕೃಷ್ಣ ಜನ್ಮಾಷ್ಟಮಿ ಹಬ್ಬಗಳಿಗೆ ಅಡಚಣೆ..?

ಮೀನಿನ ಅಂಗಡಿ ಮಾಲೀಕನಿಗೆ ತಲವಾರು ಝಳಪಿಸಿ ಎಚ್ಚರಿಕೆ