Latestಕ್ರೈಂರಾಜಕೀಯರಾಜ್ಯ

ಜಮೀರ್ ಮಗ, ಸಿಎಂ ಮೊಮ್ಮಗನಿಗಾಗಿ ವಿಧಾನಸೌಧದಲ್ಲಿ RCB ಕಾರ್ಯಕ್ರಮ ಮಾಡಿದ್ರಾ ಎಂದು ಕೇಳಿದ ಪ್ರತಾಪ್‌ ಸಿಂಹ..! ಕುಂಭಮೇಳದ ಭದ್ರತೆ ಬಗ್ಗೆ ಪಾಠ ಮಾಡಿದವರು ಈಗೆಲ್ಲಿದ್ದೀರಿ ಎಂದ ಮಾಜಿ ಸಂಸದ..!

634

ನ್ಯೂಸ್ ನಾಟೌಟ್: ವಿರಾಟ್ ಕೊಹ್ಲಿ ಫೋನ್ ಮಾಡಿ ಇವತ್ತೇ ಬಂದು ಬಿಡ್ತೀನಿ ಕಾರ್ಯಕ್ರಮ ಮಾಡಿ ಅಂದಿದ್ರಾ, ಜಮೀರ್ ಮಗ, ರಿಜ್ವಾನ್ ಮಗ, ಮುಖ್ಯ ಕಾರ್ಯದರ್ಶಿ ಮಗಳು, ಸಿಎಂ ನಿಮ್ಮ ಮೊಮ್ಮಗನಿಗಾಗಿ ವಿಧಾನಸೌಧದ ಮುಂದೆ ಕಾರ್ಯಕ್ರಮ ಮಾಡಿದ್ರಾ? ಎಂದು ಕಾಲ್ತುಳಿತ ದುರಂತ ವಿಚಾರವಾಗಿ ಸರ್ಕಾರದ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದರು.

ಸರ್ಕಾರದ ಬೇಜವಾಬ್ದಾರಿತನದಿಂದ ಸಂಭ್ರಮಾಚರಣೆ ಶೋಕಾಚರಣೆಯಾಗಿ ಬದಲಾಯಿತು. ಸಿದ್ದರಾಮಯ್ಯ ಬರೀ ಒರಟು ವ್ಯಕ್ತಿ ಅಂದುಕೊಂಡಿದ್ದೆ. ನೀವು ಸಂವೇದನೆ ಇಲ್ಲದ ನಿರ್ಭಾವುಕ ಮನುಷ್ಯ ಎಂಬುದು ನಿನ್ನೆ ಗೊತ್ತಾಯಿತು. ಸಿದ್ದರಾಮಯ್ಯ ನಿರ್ಭಾವುಕ ನಿರ್ಲಜ್ಜ ವ್ಯಕ್ತಿ ಎಂದು ವಾಗ್ದಾಳಿ ನಡೆಸಿದರು.

ಸಿಎಂ ಮೊಮ್ಮಗ, ಸಚಿವರು ಮತ್ತು ಅಧಿಕಾರಿಗಳ ಮಕ್ಕಳ ಫೋಟೋಗ್ರಾಫ್ ಆಟೋಗ್ರಾಫ್‌ಗಾಗಿ ವಿಧಾನಸೌಧದ ಮುಂದೆ ಕಾರ್ಯಕ್ರಮ ನಡೆಯಿತು. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಗೆ ಭದ್ರತೆಯ ಪಾಠ ಮಾಡಿದ್ದ ಸಂತೋಷ್ ಲಾಡ್, ಪ್ರಿಯಾಂಕ್ ಖರ್ಗೆ ಈಗ ಎಲ್ಲಿ ಹೋದ್ರು? ಯುಪಿ ಸಿಎಂ 60 ಕೋಟಿ ಜನರನ್ನು ಸಂಭಾಳಿಸಿದ್ದಾರೆ. ನೀವು 60 ಸಾವಿರ ಜನರನ್ನು ಸಂಭಾಳಿಸಲು ಆಗಲಿಲ್ಲ. ಕಾಂಗ್ರೆಸ್‌ ಗೆ ದರಿದ್ರ ಬಂದಿದೆ. ಆರ್‌ ಸಿಬಿ ಗೆಲುವಲ್ಲಿ ಪ್ರಚಾರ ಪಡೆಯಲು ಜನರನ್ನು ಬಲಿ ಕೊಟ್ಟಿತು ಎಂದು ಬೇಸರ ವ್ಯಕ್ತಪಡಿಸಿದರು.

ಡಿಸಿಎಂ ಶಾಲು, ಗ್ಲಾಸ್ ಹಾಕಿಕೊಂಡು ಪೋಸ್ ಕೊಟ್ಟಿದ್ದೆ ಕೊಟ್ಟಿದ್ದು. ಅದನ್ನು ಬಿಟ್ಟು ಯಾವ ತಯಾರಿಯೂ ನಡೆದಿರಲಿಲ್ಲ. ವಿರಾಟ್ ಕೊಹ್ಲಿ ಫೋನ್ ಮಾಡಿ ಇವತ್ತೆ ಬಂದು ಬಿಡ್ತೀನಿ ಪ್ರೋಗ್ರಾಂ ಮಾಡಿ ಅಂದಿದ್ರಾ? ನಿಮಗೆ ಮರುದಿನವೇ ಕಾರ್ಯಕ್ರಮ ಮಾಡುವ ಒತ್ತಡ ಏನಿತ್ತು ಹೇಳಿ? ರೋಡ್ ಶೋ ಮಾಡಿದ್ದರೆ ಲಕ್ಷಾಂತರ ಜನ ನೋಡುತ್ತಿದ್ದರು. ಸರ್ಕಾರಕ್ಕೆ ಮಿನಿಮಮ್ ಕಾಮನ್‌ ಸೆನ್ಸ್ ಇದ್ದಿದ್ದರೆ ಈ ಘಟನೆ ನಡೆಯುತ್ತಿರಲಿಲ್ಲ ಎಂದು ತರಾಟೆ ತೆಗೆದುಕೊಂಡರು.

ಜಮೀರ್ ಮಗ, ರಿಜ್ವಾನ್ ಮಗ, ಮುಖ್ಯ ಕಾರ್ಯದರ್ಶಿ ಮಗಳು, ಸಿಎಂ ನಿಮ್ಮ ಮೊಮ್ಮಗನಿಗಾಗಿ ವಿಧಾನಸೌಧದ ಮುಂದೆ ಕಾರ್ಯಕ್ರಮ ಮಾಡಿದ್ರಾ? ಆಂಧ್ರದಲ್ಲಿ ನಟ ಅಲ್ಲು ಅರ್ಜುನ್‌ನನ್ನು ಕಾಲ್ತುಳಿತ ಪ್ರಕರಣದಲ್ಲೇ ಅರೆಸ್ಟ್ ಮಾಡಿದ್ರು. ಈಗ ಇಲ್ಲಿ ಸಿಎಂ ಅರೆಸ್ಟ್ ಆಗುತ್ತಾರಾ? ಡಿಸಿಎಂ ಅರೆಸ್ಟ್ ಆಗುತ್ತಾರಾ? ಗೃಹಮಂತ್ರಿ ತಲೆದಂಡ ಆಗುತ್ತಾ? ಯಾರು ಇದಕ್ಕೆ ಹೊಣೆ ಹೇಳಿ ಎಂದು ಕೇಳಿದ್ದಾರೆ. ಮಕ್ಕಳು ಅವ್ಯವಸ್ಥೆಯಿಂದ ಸತ್ತಿದ್ದಾರೆ, ಅವರ ಹೆತ್ತವರಿಗೆ ಸರ್ಕಾರ ಹೇಗೆ ಉತ್ತರಿಸುತ್ತದೆ ಎಂದು ಕೇಳಿದ್ದಾರೆ. 

ಆರ್ ಸಿಬಿ ಅಭಿಮಾನಿಗಳ ಸಾವಿನ ಬಗ್ಗೆ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್..! ವಿಚಾರಣೆ ಜೂ.10ಕ್ಕೆ ಮುಂದೂಡಿಕೆ..!

ಕಾಲ್ತುಳಿತ ಪ್ರಕರಣ: ಮಕ್ಕಳ ಸಾವು ನೆನೆದು ಕಣ್ಣೀರಿಟ್ಟ ಡಿಕೆಶಿ..! ಮಕ್ಕಳ ತಾಯಿ ಮಾತನಾಡಿದ್ದನ್ನ ನನ್ನಿಂದ ಸಹಿಸಲು ಆಗ್ತಿಲ್ಲ ಎಂದ ಡಿಸಿಎಂ..!

See also  ಜೋಡುಪಾಲ :ಜೆ.ಸಿ.ಬಿ ವಾಹನವನ್ನು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿ..! ಟ್ರಾಫಿಕ್ ಜಾಮ್..!
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget