ಆವಂತಿಪೊರ(ಜಮ್ಮು-ಕಾಶ್ಮೀರ): ಜಮ್ಮು-ಕಾಶ್ಮೀರದ ಪುಲ್ವಾಮ ಜಿಲ್ಲೆಯ ಆವಂತಿಪೊರ ಪಟ್ಟಣದ ಪಂಪೊರೆ ಎಂಬಲ್ಲಿ ಶುಕ್ರವಾರ ನಸುಕಿನ ಜಾವ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಓರ್ವ ಉಗ್ರನನ್ನು ಹೊಡೆದುರುಳಿಸಿದ್ದಾರೆ ಎಂದು ವರದಿಯಾಗಿದೆ. ಸದ್ಯ ಗುಂಡಿನ ಕಾಳಗ ಮುಂದುವರಿದಿದ್ದು ಇನ್ನೂ ಹೆಚ್ಚಿನ ಉಗ್ರರು ಇದ್ದಾರೆ ಎಂದು ಹೇಳಲಾಗಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.