ಸುಳ್ಯ

ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ದಿ. ಜಾನಕಿ ವೆಂಕಟರಮಣ ಗೌಡರ ಪುಣ್ಯಸ್ಮರಣೆ

ನ್ಯೂಸ್ ನಾಟೌಟ್‌: ಕೆವಿಜಿ ಮಾತೃ ಸಂಸ್ಥೆ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸಂಸ್ಥೆಯ ಸ್ಥಾಪಕರ ಪತ್ನಿ ದಿ. ಜಾನಕಿ ವೆಂಕಟರಮಣ ಗೌಡ ಅವರ 12ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ ಗುರುವಾರ (ಆ.22) ಕಾಲೇಜಿನಲ್ಲಿ ನೆರವೇರಿತು.

ನೆಹರೂ ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ.ಎಂ. ದಿ. ಜಾನಕಿ ವೆಂಕಟರಮಣ ಗೌಡ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭ ನೆಹರೂ ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ., ಐಕ್ಯೂಎಸಿ ಸಂಯೋಜಕಿ ಡಾ.ಮಮತಾ ಕೆ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಿಥಾಲಿ ಪಿ. ರೈ ಮತ್ತು ಪದವಿ ಹಾಗೂ ಪದವಿ ಪೂರ್ವ ಕಾಲೇಜಿನ ಬೋಧಕ ಬೋಧಕೇತರ ವೃಂದದವರು ಉಪಸ್ಥಿತರಿದ್ದರು.

Related posts

ಸುಳ್ಯ: ಸಾಂದೀಪ್ ವಿಶೇಷ ಶಾಲೆಯ ನೂತನ ಕಟ್ಟಡ ಫೆ.12ಕ್ಕೆ ಲೋಕಾರ್ಪಣೆ,ಮಾಜಿ ಪ್ರಧಾನಿ ಹೆಚ್.ಡಿ. ದೇವೆಗೌಡ ಆಗಮನ

ಸುಳ್ಯ: ಕೆ.ವಿ.ಜಿ. ಮೆಡಿಕಲ್ ಕಾಲೇಜು ಸಹ ಸಂಸ್ಥೆಗಳಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಸುಳ್ಯ: ಕೊಡಗಿನ ನೆಲ್ಯಹುದಿಕೇರಿಯಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ..!ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಜಂಟಿ ಆಶ್ರಯದಲ್ಲಿ ಕಾರ್ಯಕ್ರಮ