Latestಕೆವಿಜಿ ಕ್ಯಾಂಪಸ್‌

ಸುಳ್ಯ: ಕೆವಿಜಿ ಮೆಡಿಕಲ್ ಕಾಲೇಜು, ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ ದಿ. ಜಾನಕಿ ವೆಂಕಟರಮಣ ಗೌಡರ ಪುಣ್ಯಸ್ಮರಣೆ

342

ನ್ಯೂಸ್ ನಾಟೌಟ್ : ಆಧುನಿಕ ಸುಳ್ಯದ ನಿರ್ಮಾತೃ, ಶಿಕ್ಷಣ ಬ್ರಹ್ಮ, ಕೆವಿಜಿ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷರಾದ ದಿ. ಡಾ. ಕುರುಂಜಿ ವೆಂಕಟ್ರಮಣಗೌಡರ ಧರ್ಮಪತ್ನಿ ದಿವಂಗತ ಕುರುಂಜಿ ಜಾನಕಿ ವೆಂಕಟ್ರಮಣ ಗೌಡರ 13ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ ಶುಕ್ರವಾರ (ಆ.22) ನೆರವೇರಿತು.

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ.) ಸುಳ್ಯ ಹಾಗೂ ವೈದ್ಯಕೀಯ ನಿರ್ದೇಶಕರಾದ ಡಾ ಕೆ.ವಿ ಚಿದಾನಂದ ಪೂಜ್ಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ದಿವಂಗತರನ್ನು ಸ್ಮರಿಸಿದರು. ಈ ಸಂದರ್ಭ ಮೆಡಿಕಲ್ ಸೂಪರಿಂಟೆಂಡೆಂಟ್ ಪ್ರೊ. ಡಾ.ಸಿ. ರಾಮಚಂದ ಭಟ್, ಆರ್ಥೋಪಿಡಿಕ್ ವಿಭಾಗದ ಪ್ರೊ.ಡಾ ಸುಬ್ರಮಣ್ಯ ಉಪಸ್ಥಿತರಿದ್ದರು. ಈ ಸಂದರ್ಭ ಎಲ್ಲಾ ವಿಭಾಗ ಮುಖ್ಯಸ್ಥರು, ಪ್ರಾಂಶುಪಾಲರು ಸೇರಿದಂತೆ ಹಲವಾರು ಗಣ್ಯರು ಹಾಗೂ ಬೋಧಕ ಬೋಧಕೇತರ ವೃಂದದವರು ಉಪಸ್ಥಿತರಿದ್ದರು.

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್‌ನಲ್ಲಿ ಪುಣ್ಯತಿಥಿ ಆಚರಣೆ

ಸುಳ್ಯದ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸ್ಥಾಪಕರ ಧರ್ಮಪತ್ನಿ ದಿವಂಗತ ಜಾನಕಿ ವೆಂಕಟರಮಣ ಗೌಡರ 13ನೇ ವರ್ಷದ ಪುಣ್ಯತಿಥಿಯ ಪ್ರಯುಕ್ತ ನುಡಿ ನಮನ ಕಾರ್ಯಕ್ರಮ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ನಡೆಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ (ರಿ.) ಸುಳ್ಯ ಇದರ ಕೌಂನ್ಸಿಲ್ ಮೆಂಬರ್ ಜಗದೀಶ್ ಅಡ್ತಲೆ ಪ್ರಾಸ್ತಾವಿಕ ಮಾತನಾಡಿದರು.

ಪ್ರೊ. ದಾಮೋದರ ಗೌಡ ಅವರು ಕುರುಂಜಿ ಜಾನಕಿ ವೆಂಕಟ್ರಮಣ ಗೌಡರ ತತ್ವ ಆದರ್ಶಗಳನ್ನು ತಿಳಿಸಿ ನುಡಿ ನಮನ ಸಲ್ಲಿಸಿದರು. ಈ ಸಂದರ್ಭ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ (ರಿ.) ಸುಳ್ಯ ಇದರ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಚಂದ್ರಶೇಖರ್ ಪೇರಾಲ್, ಅಕಾಡೆಮಿಕ್ ಕೋ ಆರ್ಡಿನೇಟರ್ ಡಾ. ಕವಿತಾ ಬಿ. ಎಂ., ಕೆವಿಜಿ ಆಯುರ್ವೇದ ಫಾರ್ಮ ಮತ್ತು ರಿಸರ್ಚ್ ಸೆಂಟರ್ ನ ಸಿ.ಇ.ಒ. ಡಾ. ಪುರುಷೋತ್ತಮ ಕೆ.ಜಿ., ಮೆಡಿಕಲ್ ಆಫೀಸರ್ ಡಾ. ಸನತ್ ಕುಮಾರ್ ಡಿ.ಜೆ.,

ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಡಾ. ವಿನಯ್ ಶಂಕರ್ ಭಾರದ್ವಾಜ್, ಕಚೇರಿ ಅಧೀಕ್ಷಕರಾದ ಚಂದ್ರಕುಮಾರ್ ಕೆ., ಸಂಸ್ಥೆಯ ಬೋಧಕ – ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು, ದಿ. ಕುರುಂಜಿ ಜಾನಕಿ ವೆಂಕಟರಮಣ ಗೌಡರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಡಾ. ವಿನಯ್ ಶಂಕರ್ ಭಾರದ್ವಾಜ್ ವಂದಿಸಿದರು.

See also  ಮಂಗಳೂರು-ಉಡುಪಿ ನಡುವೆ ಮೆಟ್ರೋ ತರಲು ಸರ್ಕಾರದ ಪ್ಲಾನ್..! ದ.ಕ. ಮತ್ತು ಉಡುಪಿ ಜಿಲ್ಲಾಧಿಕಾರಿಗಳಿಗೆ ಪತ್ರ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget