Latestಕ್ರೈಂರಾಜಕೀಯರಾಜ್ಯವೈರಲ್ ನ್ಯೂಸ್

ಜನಾರ್ದನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ ಪ್ರಕಟ..! ಶಾಸಕ ಸ್ಥಾನದಿಂದ ಅನರ್ಹ..?

1.1k

ನ್ಯೂಸ್ ನಾಟೌಟ್: ಮಾಜಿ ಸಚಿವ, ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಓಬಳಾಪುರ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಅಪರಾಧಿ ಎಂದು ಇಂದು(ಮೇ.6) ಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಹೈದರಾಬಾದ್‌ ನ ಸಿಬಿಐ ವಿಶೇಷ ನ್ಯಾಯಾಲಯ ಜನಾರ್ದನ ರೆಡ್ಡಿ ದೋಷಿ ಎಂದು ತೀರ್ಪು ನೀಡಿದೆ. ಜೊತೆಗೆ ಅಕ್ರಮ ಗಣಿಗಾರಿಕೆಯ ಅಪರಾಧಿಗೆ 7 ವರ್ಷಗಳ ಜೈಲು ಶಿಕ್ಷೆ ಪ್ರಕಟವಾಗಿದೆ.

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬರೋಬ್ಬರಿ 884 ಕೋಟಿ ರೂಪಾಯಿ ಅಕ್ರಮ ಎಸಗಿರೋದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಸಿಬಿಐ ಕೋರ್ಟ್‌ 7 ವರ್ಷಗಳ ಜೈಲು ಶಿಕ್ಷೆ ಪ್ರಕಟಿಸಿದೆ.

ಪ್ರಜಾಪ್ರತಿನಿಧಿ ಕಾಯಿದೆಯ ಪ್ರಕಾರ ಕೋರ್ಟ್ ತೀರ್ಪಿನಿಂದಾಗಿ ಜನಾರ್ದನ ರೆಡ್ಡಿ ಶಾಸಕ ಸ್ಥಾನದಿಂದ ಅನರ್ಹರಾಗುತ್ತಿದ್ದಾರೆ. ನಾಲ್ಕು ವರ್ಷಗಳಿಗಿಂತ ಹೆಚ್ಚಿನ ಶಿಕ್ಷೆಯಾದರೆ ಶಾಸಕ ಸ್ಥಾನ ಅನರ್ಹವಾಗಲಿದೆ. ಜೊತೆಗೆ ಮುಂದಿನ 6 ವರ್ಷಗಳ ಕಾಲ ಅಪರಾಧಿ ಚುನಾವಣೆಗೂ ಸ್ಪರ್ಧಿಸುವಂತಿಲ್ಲ.

ಸತತ 27 ಪ್ರಕರಣಗಳನ್ನು ಗೆದ್ದ ನಕಲಿ ವಕೀಲ ಅರೆಸ್ಟ್..! ನಕಲಿ ವಕೀಲನ ಅಸಲಿ ಕಥೆ..!

ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಮೇಲೆ ರೌಡಿಶೀಟರ್ ಓಪನ್ ಮಾಡಿದ್ದೇ ಬಿಜೆಪಿ ಎಂದ ದಿನೇಶ್ ಗುಂಡೂರಾವ್..! ಇಲ್ಲಿದೆ ಸಂಪೂರ್ಣ ಮಾಹಿತಿ

See also  ಪ್ರಕರಣವೊಂದಕ್ಕೆ ವಿಚಾರಣೆಗೆ ಕರೆತಂದ ವ್ಯಕ್ತಿಗೆ ಮೂರ್ಛೆ ರೋಗ..!,ಪೊಲೀಸ್ ಸ್ಟೇಶನ್ ಎದುರಲ್ಲೇ ಉಸಿರುಚೆಲ್ಲಿದ ಯುವಕ,ಏನಿದು ಘಟನೆ?ಯಾವುದು ಆ ಪ್ರಕರಣ?
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget