ಕ್ರೈಂರಾಜಕೀಯವೈರಲ್ ನ್ಯೂಸ್

ಜನತಾ ದರ್ಶನದಲ್ಲಿ ಬಿ.ವೈ ವಿಜಯೇಂದ್ರ ಮತ್ತು ಪ್ರೀತಂಗೌಡ ವಿರುದ್ಧ ಸಿಎಂ ಸಿದ್ದುಗೆ ದೂರು ನೀಡಿದ್ಯಾರು? ಆತನ ಪತ್ನಿಗೆ ಕಿರುಕುಳ ನೀಡಿದ್ದರು ಎಂದು ಆರೋಪಿಸಿದ್ದೇಕೆ?

233

ನ್ಯೂಸ್‌ ನಾಟೌಟ್‌: ಹಾಸನ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿಗೆ ಕಳಪೆ ಆಹಾರ ಪೂರೈಕೆ ಮಾಡುತ್ತಿರುವುದರ ವಿರುದ್ಧ ಕ್ರಮ ಕೈಗೊಂಡಿದ್ದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಶಾಸಕ ಪ್ರೀತಂ ಗೌಡ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಹಾಸನ ಮೂಲದ ಮಹೇಂದ್ರ ಎಂಬಾತ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ದೂರು ನೀಡಿದ್ದಾರೆ ಎನ್ನಲಾಗಿದೆ.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರ (ನ.27)ರಂದು ನಡೆದ ಜನತಾ ದರ್ಶನದಲ್ಲಿ ಹಾಸನ ಮೂಲದ ಮಹೇಂದ್ರ ಎಂಬವರು, ತಮ್ಮ ಪತ್ನಿ ಜಯಕಿರಣ ಎಂಬುವವರು ಹಾಸನ ಜಿಲ್ಲೆಯ ಮಕ್ಕಳ ಅಭಿವೃದ್ಧಿ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ.

ಈ ವೇಳೆ ಅಂಗನವಾಡಿಗಳಿಗೆ ಕಳಪೆ ಆಹಾರ ಪೂರೈಕೆಯನ್ನು ಪತ್ತೆ ಮಾಡಿ, ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದರು. ಕಳಪೆ ಆಹಾರ ಪೂರೈಕೆ ಮಾಡುತ್ತಿರುವವರು ಹಿಂದಿನ ಶಾಸಕ ಪ್ರೀತಂ ಗೌಡ ಬೆಂಬಲಿಗರಾಗಿದ್ದರು. ಹೀಗಾಗಿ ಬಿ.ವೈ. ವಿಜಯೇಂದ್ರ ಮತ್ತು ಪ್ರೀತಂ ಗೌಡ ನನ್ನ ಪತ್ನಿಗೆ ಕಿರುಕುಳ ನೀಡಿದ್ದಲ್ಲದೆ, ಆಕೆ ವಿರುದ್ಧ ಎರಡು ಎಫ್‌ಐಆರ್‌ ದಾಖಲಾಗುವಂತೆ ಮಾಡಿದ್ದಾರೆ ಎಂದು ಸಿಎಂ ಗೆ ದೂರು ನೀಡಿದ್ದಾರೆ.

ಅದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಎಲ್ಲ ವಿವರಗಳನ್ನೂ ಕೊಡು ತನಿಖೆ ಮಾಡಿಸುತ್ತೇನೆ. ತಪ್ಪಿತಸ್ಥರು ಯಾರೇ ಇದ್ದರೂ ಕ್ರಮ ಕೈಗೊಳ್ಳುತ್ತೇನೆ. ಹಾಗೆಯೇ, ಅಂಗನವಾಡಿಗಳಿಗೆ ಗುಣಮಟ್ಟದ ಆಹಾರ ಪೂರೈಕೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸುತ್ತೇನೆ’ ಎಂದು ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಜತೆಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಪತ್ರ ನೀಡಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಈ ಕುರಿತು ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದರೂ, ಯಾವುದೇ ಪ್ರಯೋಜನವಾಗಿಲ್ಲ. ಹಾಸನ ಜಿಲ್ಲಾಧಿಕಾರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ಮಟ್ಟದ ಅಧಿಕಾರಿಗಳಿಗೆ ಪ್ರಕರಣದ ವಿವರ ನೀಡಿ, ತನಿಖೆ ನಡೆಸುವಂತೆ ಮೂರು ವರ್ಷಗಳ ಹಿಂದೆಯೇ ಕೋರಿದ್ದೇನೆ. ಆದರೆ, ಈವರೆಗೆ ತನಿಖೆ ನಡೆಸಿಲ್ಲ. ಅದರ ಬಗ್ಗೆ ನನ್ನ ಪತ್ನಿಯನ್ನು ವರ್ಗಾವಣೆ ಮಾಡಿ ಹಿಂಸಿಸಲಾಗಿದೆ ಎಂದು ಆರೋಪಿಸಿದ್ದಾರೆ ಎನ್ನಲಾಗಿದೆ.

See also  ನಿಶ್ಚಿತಾರ್ಥಕ್ಕೆ ಬಂದಿದ್ದ ತಾಯಿ - ಮಗಳು ನಾಪತ್ತೆ..!
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget