Latestರಾಜ್ಯ

ಜನಿವಾರ ಕಾರಣದಿಂದ ಕೆಸಿಇಟಿ ಪರೀಕ್ಷೆ ವಂಚಿತ ವಿದ್ಯಾರ್ಥಿಗೆ ನೆರವಾದ ಸಚಿವ ಈಶ್ವರ ಬಿ. ಖಂಡ್ರೆ

844

ನ್ಯೂಸ್‌ ನಾಟೌಟ್‌: ಬೀದರ್‌ ನ ಸಿಇಟಿ ಪರೀಕ್ಷಾ ಕೇಂದ್ರದ ಸಿಬ್ಬಂದಿಯ ಉದ್ಧಟತನದಿಂದ ಜನಿವಾರ ತೆಗೆಯದ ಕಾರಣಕ್ಕೆ ಕೆಸಿಇಟಿ ಗಣಿತ ಪರೀಕ್ಷೆಯಿಂದ ವಂಚಿತ ವಿದ್ಯಾರ್ಥಿಗೆ ಸಚಿವ ಈಶ್ವರ ಬಿ ಖಂಡ್ರೆ ನೆರವಾಗಿದ್ದಾರೆ.

ವಿದ್ಯಾರ್ಥಿ ಸುಚಿವ್ರತ್ ಗೆ ಭಾಲ್ಕಿಯ ಭೀಮಣ್ಣ ಖಂಡ್ರೆ ತಾಂತ್ರಿಕ ವಿದ್ಯಾಲಯದಲ್ಲಿ ಉಚಿತ ಪ್ರವೇಶ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ ಭರವಸೆ ನೀಡಿದ್ದಾರೆ. ಭಾನುವಾರ (ಏ.20) ಸಚಿವ ರಹೀಂಖಾನ್ ಅವರ ಜೊತೆಯಲ್ಲಿ ಸುಚಿವ್ರತ್ ಕುಲಕರ್ಣಿ ಮನೆಗೆ ಭೇಟಿ ನೀಡಿ ವಿದ್ಯಾರ್ಥಿ ಹಾಗೂ ಕುಟುಂಬದ ಸದಸ್ಯರಿಗೆ ಆತ್ಮಸ್ಥೈರ್ಯ ತುಂಬಿದ ಈಶ್ವರ ಖಂಡ್ರೆ, ಖಾಸಗಿ ಕಾಲೇಜಿನ ಸಿಬ್ಬಂದಿಯಿಂದ ಇಂತಹ ಲೋಪವಾಗಿದ್ದು, ಇದು ನೋವಿನ ಸಂಗತಿ. ಇನ್ನು ಮುಂದೆ ಇಂತಹ ಘಟನೆ ಮರುಕಳಿಸದಂತೆ ಎಚ್ಚರ ವಹಿಸಲು ಸೂಚಿಸಲಾಗಿದೆ. ಈ ಘಟನೆ ನಡೆಯಬಾರದಾಗಿತ್ತು. ಈ ಬಗ್ಗೆ ತಮ್ಮ ಗಮನಕ್ಕೆ ಬಂದ ಕೂಡಲೇ ತನಿಖೆ ನಡೆಸಿ 24 ಗಂಟೆಯೊಳಗೆ ವರದಿ ನೀಡುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದ್ದೆ, ವರದಿ ಆಧಾರದ ಮೇಲೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಆಗಿದೆ ಎಂದರು.

ವಿದ್ಯಾರ್ಥಿಯ ಶೈಕ್ಷಣಿಕ ಭವಿಷ್ಯಕ್ಕೆ ತೊಂದರೆ ಆಗಬಾರದು ಎಂಬುದು ಎಲ್ಲರ ಭಾವನೆ, ಹೀಗಾಗಿ ಭಾಲ್ಕಿಯ ತಮ್ಮ ಇಂಜಿನಿಯರಿಂಗ್ ಕಾಲೇಜಿನಲ್ಲಿ ಉಚಿತ ಸೀಟ್ ನೀಡುವುದಾಗಿ ಭರವಸೆ ನೀಡಿದರು. ಸುಚಿವ್ರತ್ ಗೆ ಪ್ರತ್ಯೇಕವಾಗಿ ಪರೀಕ್ಷೆ ನಡೆಸಲು ಅವಕಾಶವಿದೆಯೇ ಎಂಬ ಸಾಧ್ಯತೆಗಳ ಬಗ್ಗೆ ಪರಿಶೀಲಿಸಲಾಗುತ್ತಿದ್ದು, ಈ ಬಗ್ಗೆ ಉನ್ನತ ಶಿಕ್ಷಣ ಸಚಿವರೊಂದಿಗೆ ಮಾತನಾಡಿರುವುದಾಗಿ ತಿಳಿಸಿದ ಈಶ್ವರ ಖಂಡ್ರೆ ವಿದ್ಯಾರ್ಥಿಗೆ ಕಾಮಡ್ ಕೆ ಪರೀಕ್ಷೆ ಬರೆಯಲೂ ವಿದ್ಯಾರ್ಥಿಗೆ ಅವಕಾಶವಿದೆ. ಆ ಸೀಟು ಲಭಿಸಿದರೂ ನೆರವು ನೀಡಲಾಗುವುದು, ಸರ್ಕಾರ ನೊಂದ ವಿದ್ಯಾರ್ಥಿ ಮತ್ತು ಕುಟುಂಬದ ಸದಸ್ಯರೊಂದಿಗಿದೆ ಎಂದು ಭರವಸೆ ನೀಡಿದರು.

See also  ಅಮೆರಿಕ ಮತ್ತು ಉಕ್ರೇನ್ ಅಧ್ಯಕ್ಷರ ನಡುವೆ ಮಾತಿನ ಚಕಮಕಿ..! ನೀವೇ 3ನೇ ಮಹಾಯುದ್ಧಕ್ಕೆ ಕಾರಣರಾಗುತ್ತೀರಿ ಎಂದು ಎಚ್ಚರಿಸಿದ ಟ್ರಂಪ್..! ವಿಡಿಯೋ ವೈರಲ್
  Ad Widget   Ad Widget   Ad Widget   Ad Widget   Ad Widget   Ad Widget   Ad Widget