ಕರಾವಳಿ

ಪೆರ್ಡೂರು ಮೇಳದಿಂದ ಭಾಗವತ ರಾಘವೇಂದ್ರ ಆಚಾರ್ಯ ಜನ್ಸಾಲೆ ನಿರ್ಗಮನ

775

ಕುಂದಾಪುರ : ದಿಢೀರ್ ಬೆಳವಣಿಗೆಯೊಂದರಲ್ಲಿ ಪೆರ್ಡೂರು ಅನಂತಪದ್ಮನಾಭ ಯಕ್ಷಗಾನ ಮೇಳದ ಪ್ರಧಾನ ಭಾಗವತರಾಗಿ ಸುಬ್ರಹ್ಮಣ್ಯ ಧಾರೇಶ್ವರ ಅವರು ಮತ್ತೆ ಆಗಮಿಸಲಿದ್ದಾರೆ. ಇದುವರೆಗೆ ಪ್ರಧಾನ ಭಾಗವತರಾಗಿದ್ದ ಜನ್ಸಾಲೆ ರಾಘವೇಂದ್ರ ಆಚಾರ್ಯ ಇದೀಗ ಪೆರ್ಡೂರು ಮೇಳದಿಂದ ನಿರ್ಗಮಿಸಿದ್ದಾರೆ.

ಹಗಲು ಹೊತ್ತಿನಲ್ಲಿ ಗಾನವೈಭವ, ತಾಳಮದ್ದಲೆಯಂತಹ ಕಾರ್ಯಕ್ರಮಕ್ಕೆ ತೆರಳಲು ನಿರ್ಬಂಧ ವಿಧಿಸಲಾಗಿದೆ. ನನ್ನನ್ನು ನಾನು ಮಾರಿಕೊಳ್ಳಲು ತಯಾರಿಲ್ಲ. ಆದ್ದರಿಂದ ಪೆರ್ಡೂರು ಮೇಳದ ತಿರುಗಾಟಕ್ಕೆ ವಿದಾಯ ಹೇಳಿರುವುದಾಗಿ ಭಾಗವತ ಜನ್ಸಾಲೆ ರಾಘವೇಂದ್ರ ಆಚಾರ್ಯ ಪ್ರತಿಕ್ರಿಯಿಸಿದ್ದಾರೆ. ಪೆರ್ಡೂರು ಮೇಳ ಬಿಟ್ಟ ಬಳಿಕ ಯಾವುದೇ ಮೇಳ ತಿರುಗಾಟ ಮಾಡಿರಲಿಲ್ಲ. ಈಗ ಕರುಣಾಕರ ಶೆಟ್ಟಿ ಅವರು ಮತ್ತೆ ಮೇಳಕ್ಕೆ ಸೇರುವಂತೆ ಆಹ್ವಾನಿಸಿರುವುದಾಗಿ ಭಾಗವತ ಸುಬ್ರಹ್ಮಣ್ಯ ಧಾರೇಶ್ವರರು ತಿಳಿಸಿದ್ದಾರೆ.

See also  ಪುತ್ತೂರು: ಕಂಬಳದ ಕೋಣಕ್ಕೆ ಹೊಡೆದರೂ ಶಿಕ್ಷೆಯಾಗುವ ಕಾಲವಿದು, ಹಿಂದೂ ಕಾರ್ಯಕರ್ತರಿಗೆ ಹೊಡೆಸಿದ್ದು ಕಾಂಗ್ರೆಸ್ ಎಂದ ಕಲ್ಲಡ್ಕ ಪ್ರಭಾಕರ್ ಭಟ್
  Ad Widget   Ad Widget   Ad Widget   Ad Widget   Ad Widget   Ad Widget   Ad Widget