ನ್ಯೂಸ್ ನಾಟೌಟ್: ಜಿಲ್ಲಾ ಸರ್ಕಾರಿ (ಜಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಾಗಿದ್ದ ರೋಗಿಯೊಬ್ಬ ಎರಡನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿಯಲ್ಲಿ ಇಂದು(ಫೆ.19) ನಡೆದಿದೆ.
“ಜಮ್ ಜಮ್ ಕಾಲೋನಿ”ಯ ಡೆಕ್ಕನ್ ಕಾಲೇಜು ಹತ್ತಿರದ ನಿವಾಸಿ ಸೈಯದ್ ಅಝರುದ್ದೀನ್ (33) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುತುತಿಸಲಾಗಿದೆ. ಟಿಬಿ ಕಾಯಿಲೆಯಿಂದ ಬಳಲುತ್ತಿದ್ದ ಈತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅನಾರೋಗ್ಯದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗುತ್ತಿದೆ.
ಆಸ್ಪತ್ರೆಯ ವೈದ್ಯರು ಮತ್ತು ಆಡಳಿತ ವ್ಯವಸ್ಥೆ ನಿರ್ಲಕ್ಷ್ಯವೇ ಆತ್ಮಹತ್ಯೆಗೆ ಕಾರಣ ಎಂದು ಮೃತ ವ್ಯಕ್ತಿಯ ಪತ್ನಿ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.