ಕ್ರೈಂ

ಜೆಸಿಬಿ ಹರಿಸಿ ಮಹಿಳೆಯ ಕೊಲೆ ಯತ್ನ; ಎಫ್ಐಆರ್ ದಾಖಲು

ಜೈಪುರ: ರಾಜಸ್ಥಾನದಲ್ಲಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿದೆ. ಈ ಸಂದರ್ಭದಲ್ಲಿ ಜೆಸಿಬಿ ಹರಿಸಿ ಮಹಿಳೆಯ ಕೊಲೆ ಯತ್ನಕ್ಕೆ ಸಂಬಂಧಿಸಿದಂತೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ರಾಜಸ್ಥಾನದ ಬಾರ್ಮರ್ ನಲ್ಲಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಎಫ್ಐಆರ್ ದಾಖಲಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಎಸ್ ಪಿ ದೀಪಕ್ ಭಾರ್ಗವ್ ಹೇಳಿಕೆಯನ್ನು ಎಎನ್ ಐ ಟ್ವೀಟ್ ಮಾಡಿದೆ.ವಿಡಿಯೊದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆಯುತ್ತಿರುವುದು ಕಂಡುಬಂದಿದೆ. ಜೆಸಿಬಿ ಮೇಲೆ ಮಹಿಳೆ ಕಲ್ಲು ಎಸೆಯುತ್ತಾರೆ. ಈ ಸಂದರ್ಭದಲ್ಲಿ ಮಹಿಳೆಯನ್ನು ಜೆಸಿಬಿ ಅಟ್ಟಾಡಿಸಿಕೊಂಡು ಹೋಗುವ ದೃಶ್ಯ ಸೆರೆಯಾಗಿದೆ.

 ಈ ಘಟನೆಯನ್ನು ರಾಜಕೀಯ ಅಸ್ತ್ರವನ್ನಾಗಿ ಬಳಕೆ ಮಾಡಿರುವ ಬಿಜೆಪಿ, ರಾಜಸ್ಥಾನದಲ್ಲಿ ಮಹಿಳೆಯರು ಸುರಕ್ಷಿತರಲ್ಲ ಎಂದು ಆಡಳಿತರೂಢ ಕಾಂಗ್ರೆಸ್ ವಿರುದ್ಧ ದೂರಿದೆ.

Related posts

ದೇವಸ್ಥಾನದಲ್ಲಿ ನಮಾಜ್ ಮಾಡಿದ ತಾಯಿ, ಮಗಳನ್ನು ಬಂಧಿಸಿದ್ದೇಕೆ ಪೊಲೀಸರು? ಮಹಿಳೆ ಮತ್ತು ಮಗಳಿಗೆ ಧರ್ಮಗುರು ಹೇಳಿದ್ದ ರಹಸ್ಯವೇನು? ಇಲ್ಲಿದೆ ವೈರಲ್ ವಿಡಿಯೋ

ನಿವೃತ್ತ ಅರಣ್ಯಾಧಿಕಾರಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ! ಡೆತ್ ನೋಟ್‌ನಲ್ಲಿತ್ತು ಅಸಲಿ ಕಾರಣ !

ದನದ ಕೊಟ್ಟಿಗೆಯಲ್ಲಿ ಖೋಟಾ ನೋಟು ಪ್ರಿಂಟ್‌ ಮಾಡುತ್ತಿದ್ದ ತಂದೆ – ಮಗ ಅರೆಸ್ಟ್..! ನೋಟು ಮುದ್ರಣಕ್ಕೆ ಬಳಸುತ್ತಿದ್ದ ಸಾಮಗ್ರಿಗಳು ವಶಕ್ಕೆ..!