ಕ್ರೈಂ

ಜೆಸಿಬಿ ಹರಿಸಿ ಮಹಿಳೆಯ ಕೊಲೆ ಯತ್ನ; ಎಫ್ಐಆರ್ ದಾಖಲು

797

ಜೈಪುರ: ರಾಜಸ್ಥಾನದಲ್ಲಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿದೆ. ಈ ಸಂದರ್ಭದಲ್ಲಿ ಜೆಸಿಬಿ ಹರಿಸಿ ಮಹಿಳೆಯ ಕೊಲೆ ಯತ್ನಕ್ಕೆ ಸಂಬಂಧಿಸಿದಂತೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ರಾಜಸ್ಥಾನದ ಬಾರ್ಮರ್ ನಲ್ಲಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಎಫ್ಐಆರ್ ದಾಖಲಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಎಸ್ ಪಿ ದೀಪಕ್ ಭಾರ್ಗವ್ ಹೇಳಿಕೆಯನ್ನು ಎಎನ್ ಐ ಟ್ವೀಟ್ ಮಾಡಿದೆ.ವಿಡಿಯೊದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆಯುತ್ತಿರುವುದು ಕಂಡುಬಂದಿದೆ. ಜೆಸಿಬಿ ಮೇಲೆ ಮಹಿಳೆ ಕಲ್ಲು ಎಸೆಯುತ್ತಾರೆ. ಈ ಸಂದರ್ಭದಲ್ಲಿ ಮಹಿಳೆಯನ್ನು ಜೆಸಿಬಿ ಅಟ್ಟಾಡಿಸಿಕೊಂಡು ಹೋಗುವ ದೃಶ್ಯ ಸೆರೆಯಾಗಿದೆ.

 ಈ ಘಟನೆಯನ್ನು ರಾಜಕೀಯ ಅಸ್ತ್ರವನ್ನಾಗಿ ಬಳಕೆ ಮಾಡಿರುವ ಬಿಜೆಪಿ, ರಾಜಸ್ಥಾನದಲ್ಲಿ ಮಹಿಳೆಯರು ಸುರಕ್ಷಿತರಲ್ಲ ಎಂದು ಆಡಳಿತರೂಢ ಕಾಂಗ್ರೆಸ್ ವಿರುದ್ಧ ದೂರಿದೆ.

See also  ಮಕ್ಕಳಿದ್ದ ಶಾಲಾ ಬಸ್ ಗೆ ಬೆಂಕಿ ಹಚ್ಚಲು ಮುಂದಾದ ಪ್ರತಿಭಟನಾಕಾರರು..! ಆರೋಪಿಗಳನ್ನು ಬಂಧಿಸಿದ ಪೊಲೀಸರು..! ಇಲ್ಲಿದೆ ವಿಡಿಯೋ
  Ad Widget   Ad Widget   Ad Widget   Ad Widget   Ad Widget   Ad Widget   Ad Widget