Uncategorized

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: ರಾಜ್ಯದಲ್ಲಿ ಶೀಘ್ರವೇ 5 ಸಾವಿರ ಶಿಕ್ಷಕರ ನೇಮಕಾತಿ

ಶಿವಮೊಗ್ಗ: ಶಿಕ್ಷಕರ ಕೊರತೆ ನೀಗಿಸಲು ರಾಜ್ಯದಲ್ಲಿ 5 ಸಾವಿರ ಶಿಕ್ಷಕರ ನೇಮಕಾತಿಗೆ ಅನುಮೋದನೆ ನೀಡಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ಹೊಸನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಈ ವಿಚಾರವನ್ನು ತಿಳಿಸಿದ ಸಚಿವರು, ವಿಜ್ಞಾನ ಮತ್ತು ಗಣಿತ ಶಿಕ್ಷಕರ ನೇಮಕಾತಿಯಲ್ಲಿ ಕೊಂಚ ತಾಂತ್ರಿಕ ತೊಡಕು ಇದೆ. ಇದನ್ನು ಸರಿಪಡಿಸಿಕೊಂಡು ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದರು. ಪ್ರತಿ ಗ್ರಾಮ ಪಂಚಾಯಿತಿಗೆ ಒಂದು ಮಾದರಿ ಶಾಲೆ ನಿರ್ಮಿಸಲಾಗುವುದು. ಈ ಶಾಲೆಗೆ ಸಣ್ಣಪುಟ್ಟ ಶಾಲೆಗಳನ್ನು ವಿಲೀನ ಮಾಡುವ ಚಿಂತನೆ ಇದೆ. ಶೈಕ್ಷಣಿಕ ವರ್ಷದಿಂದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರಲಾಗುವುದು. ಇದಕ್ಕಾಗಿ ತಜ್ಞರ ಸಮಿತಿ ರಚಿಸಲಾಗಿದೆ ಎಂದು ಅವರು ಹೇಳಿದರು.

Related posts

ಶಾಲೆಗೆಂದು ರಸ್ತೆ ಬದಿ ಅಟೋಗೆ ಕಾಯುತ್ತಿದ್ದ ಬಾಲಕಿಗೆ ಬೈಕ್ ಡಿಕ್ಕಿ:ಗಂಭೀರ ಗಾಯ

ಶ್ರೀಕೃಷ್ಣ ಬಳಗ ಗೂನಡ್ಕ ವತಿಯಿಂದ 27ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಗೆ ಸಿದ್ಧತೆ, ಆ.26 ರಂದು ಸಾಧಕರ ಸ್ಮರಣೆ ವಿಶೇಷ ಆಟೋಟ ಸ್ಪರ್ಧೆಗೆ ಆಹ್ವಾನ

ರಾಜ್ಯದಲ್ಲೂ ಬಾಂಬೆ ಮಿಠಾಯಿ, ಗೋಬಿ ಮಂಚೂರಿ ಬ್ಯಾನ್?ಸೋಮವಾರ ಆರೋಗ್ಯ ಸಚಿವರಿಂದ ಮಹತ್ವದ ಸುದ್ದಿಗೋಷ್ಠಿ