Latestಉದ್ಯೋಗ ವಾರ್ತೆ

ಬ್ಯಾಂಕ್ ಆಫ್ ಬರೋಡಾದಲ್ಲಿ 4000 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ

1.1k
Spread the love

ನ್ಯೂಸ್ ನಾಟೌಟ್: ಬ್ಯಾಂಕ್ ಆಫ್ ಬರೋಡಾ ಅಧಿಕೃತ ಅಧಿಸೂಚನೆಯ ಮೂಲಕ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಸರ್ಕಾರಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಮಾರ್ಚ್​​ 11 ಅಥವಾ ಅದಕ್ಕಿಂತ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.

BOB ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.
ಅಭ್ಯರ್ಥಿಯು 01-02-2025 ರಂತೆ ಕನಿಷ್ಠ 20 ವರ್ಷಗಳು ಮತ್ತು ಗರಿಷ್ಠ 28 ವರ್ಷಗಳನ್ನು ಹೊಂದಿರಬೇಕು. ವಯೋಮಿತಿ ಸಡಿಲಿಕೆಗೆ ಅವಕಾಶವಿದೆ ಮತ್ತು ಒಬಿಸಿ ಅಭ್ಯರ್ಥಿಗಳು: 3 ವರ್ಷಗಳ ಸಡಿಲಿಕೆ, SC/ST ಅಭ್ಯರ್ಥಿಗಳು: 5 ವರ್ಷಗಳ ಸಡಿಲಿಕೆ ನೀಡಲಾಗುತ್ತಿದೆ.

ಸಾಮಾನ್ಯ, ಒಬಿಸಿ, ಇಡಬ್ಲ್ಯೂಎಸ್ ಅಭ್ಯರ್ಥಿಗಳು: ರೂ. 800/- ಶುಲ್ಕ ಪಾವತಿಸಬೇಕು ಮತ್ತು ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳು: ರೂ. 600/- ಹಾಗೂ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು: ರೂ. 400/- ಪಾವತಿಸಲು ತಿಳಿಸಿದೆ.

ಆಯ್ಕೆ ಪ್ರಕ್ರಿಯೆಯು ಆನ್‌ಲೈನ್ ಪರೀಕ್ಷೆ, ದಾಖಲೆ ಪರಿಶೀಲನೆ, ಆಯಾ ರಾಜ್ಯದ ಸ್ಥಳೀಯ ಭಾಷಾ ಪರೀಕ್ಷೆಗಳನ್ನು ಒಳಗೊಂಡಿರುತ್ತದೆ.
ಮೊದಲನೆಯದಾಗಿ ಬ್ಯಾಂಕ್ ಆಫ್ ಬರೋಡಾದ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ. ಬ್ಯಾಂಕ್ ಆಫ್ ಬರೋಡಾದ ಅಪ್ರೆಂಟಿಸ್ ಅಪ್ಲೈ ಆನ್‌ ಲೈನ್ – ಲಿಂಕ್ ಮೇಲೆ ಕ್ಲಿಕ್ ಮಾಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಿ.

See also  ಸುಳ್ಯ: ಬೈಕ್ - ರಿಕ್ಷಾ ನಡುವೆ ಅಪಘಾತ, ಬೈಕ್ ಸವಾರನಿಗೆ ಗಾಯ
  Ad Widget   Ad Widget   Ad Widget   Ad Widget