ಕ್ರೈಂ

ಬೈಕ್-ಲಾರಿ ಡಿಕ್ಕಿ: ಪತ್ರಕರ್ತ ಗಂಗಾಧರ ಮೂರ್ತಿ ಸಾವು

370
Spread the love

ಬೆಂಗಳೂರು: ಇಲ್ಲಿನ ಟೌನ್ ಹಾಲ್ ಮುಂದೆ ಲಾರಿಯೊಂದು ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ವಿಜಯವಾಣಿ ಹಿರಿಯ ಪತ್ರಕರ್ತ ಗಂಗಾಧರ ಮೂರ್ತಿ (49) ಮೃತಪಟ್ಟಿದ್ದಾರೆ.

ಮೃತರು, ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಬೈಕ್ ನಲ್ಲಿ ಚಾಮರಾಜಪೇಟೆಯಲ್ಲಿರುವ ವಿಜಯವಾಣಿ ಕಚೇರಿಗೆ ಬರುತ್ತಿದ್ದಾಗ, ಟೌನ್ ಹಾಲ್ ಬಳಿ ನಿಯಂತ್ರಣ ತಪ್ಪಿದ ಲಾರಿ ಡಿವೈಡರ್ ಡಿಕ್ಕಿ ಹೊಡೆದು ಬಿದ್ದಿದ್ದು, ಅಡಿಯಲ್ಲಿ ಸಿಲುಕಿದ ಗಂಗಾಧರ ಮೂರ್ತಿ ತೀವ್ರವಾಗಿ ಗಾಯಗೊಂಡಿದ್ದರು. ತಕ್ಷಣವೇ ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಿ, ಚಿಕಿತ್ಸೆ ಕೊಡಿಸಿದರೂ ಪ್ರಯೋಜನವಾಗದೆ ಕೊನೆಯುಸಿರೆಳೆದರು.

See also  ಅಂಗನವಾಡಿಯಲ್ಲಿ ಆಟವಾಡುತ್ತಾ ಕುಸಿದು ಬಿದ್ದ 5 ವರ್ಷದ ಬಾಲಕಿ..! ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿ ಸಾವು..!
  Ad Widget   Ad Widget   Ad Widget   Ad Widget   Ad Widget   Ad Widget