ನ್ಯೂಸ್ ನಾಟೌಟ್: ಹಿರಿಯ ಪತ್ರಕರ್ತ ಎಸ್.ಕೆ. ಶ್ಯಾಮಸುಂದರ್ ಅವರು ಇದೀಗ ನಿಧನರಾಗಿದ್ದಾರೆ.
ಕನ್ನಡದ ಹಲವಾರು ವೆಬ್ ಸೈಟ್ ಗಳಲ್ಲಿ ಪತ್ರಕರ್ತರಾಗಿ ದುಡಿದಿದ್ದರು. ಸಿಎಂ ಸಿದ್ದರಾಮಯ್ಯ ಫೇಸ್ ಬುಕ್ ಪೇಜ್ ನಲ್ಲಿ ಸಂತಾಪ ಸೂಚಿಸಿದ್ದಾರೆ. “ಶ್ಯಾಮ್ ನಿಧನದ ಸುದ್ದಿ ದುಃಖವುಂಟುಮಾಡಿದೆ. ಬರಹವನ್ನೇ ಬದುಕಾಗಿಸಿಕೊಂಡಿದ್ದ ಶ್ಯಾಮಸುಂದರ್ ಅವರು ಸುದೀರ್ಘಕಾಲ ಪತ್ರಕರ್ತರಾಗಿ ದುಡಿದವರು.ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ” ಎಂದು ತಿಳಿಸಿದ್ದಾರೆ.