ರಾಜಕೀಯವೈರಲ್ ನ್ಯೂಸ್

ವಿಪಕ್ಷ ನಾಯಕನ ಆಯ್ಕೆ ಮಾಡದ ಬಿಜೆಪಿಗೆ ಮತ್ತೆ ಮುಜುಗರ? ಜೆ.ಪಿ ನಡ್ಡಾ ಮತ್ತು ನಳಿನ್ ಗೆ ಲೀಗಲ್‌ ನೋಟಿಸ್ ನೀಡಿದವರ್ಯಾರು? ನೋಟಿಸ್ ನಲ್ಲೇನಿದೆ?

184

ನ್ಯೂಸ್ ನಾಟೌಟ್: ರಾಜ್ಯ ವಿಧಾನಸಭಾ ಚುನಾವಣೆ ಬಳಿಕ ವಿರೋಧ ಪಕ್ಷದ ಸ್ಥಾನದಲ್ಲಿರುವ ಬಿಜೆಪಿ ಈವರೆಗೆ ವಿಪಕ್ಷ ನಾಯಕನನ್ನು ಆಯ್ಕೆ ಮಾಡದಿರುವುದು ಹಲವು ಟೀಕೆಗೆ ಕಾರನವಾಗಿದೆ. ಇದನ್ನು ಆಕ್ಷೇಪಿಸಿ ವಕೀಲ ಎನ್.ಪಿ.ಅಮೃತೇಶ್ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಮತ್ತು ಮುಖ್ಯ ಕಾರ್ಯದರ್ಶಿಗೆ ಶನಿವಾರ ಲೀಗಲ್ ನೋಟಿಸ್ ನೀಡಿದ್ದಾರೆ.

ವಿಪಕ್ಷ ನಾಯಕನ ಆಯ್ಕೆ ಸಭೆ ನಡೆಸಲು ನಿರ್ದೇಶಿಸಲು ವಿಫಲವಾದರೆ ಸಕ್ಷಮ ಪ್ರಾಧಿಕಾರ, ನ್ಯಾಯಾಲಯದ ಮೆಟ್ಟಿಲೇರುವುದು ಅನಿವಾರ್ಯವಾಗಲಿದೆ ಎಂದು ನೋಟಿಸ್​​ನಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕರು ತಮ್ಮ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸರಕಾರಕ್ಕೆ ಮನವಿ ಸಲ್ಲಿಸಬೇಕಾದರೆ ಅವರು ಅಂತಿಮವಾಗಿ ವಿಪಕ್ಷ ನಾಯಕನ ಮೂಲಕ ಹೋಗಬೇಕಾಗುತ್ತದೆ. ಆದರೆ, ಬಿಜೆಪಿಯು ವಿಪಕ್ಷ ನಾಯಕನನ್ನು ಆಯ್ಕೆ ಮಾಡದೇ ಸಾಂವಿಧಾನಿಕ ಶೂನ್ಯ ವಾತಾವರಣ ನಿರ್ಮಿಸಿದೆ. ವಿಧಾನಸಭೆಯ ಪ್ರತಿಪಕ್ಷದ ನಾಯಕನಿಗೆ ಹಲವು ಅಧಿಕಾರ ಮತ್ತು ಕರ್ತವ್ಯಗಳಿವೆ.

ಲೋಕಾಯುಕ್ತ, ಉಪಲೋಕಾಯುಕ್ತ, ಕೆಪಿಎಸ್‌ಸಿ ಸದಸ್ಯರು, ಆರ್‌ಟಿಐ ಆಯುಕ್ತರು, ಗ್ರಾಹಕರ ಒಕ್ಕೂಟ, ಆಡಳಿತಾತ್ಮಕ ನ್ಯಾಯ ಮಂಡಳಿ ಇತ್ಯಾದಿ ಸಾಂವಿಧಾನಿಕ ನೇಮಕಾತಿಗಳಲ್ಲಿ ವಿಪಕ್ಷ ನಾಯಕ ಭಾಗವಹಿಸಬೇಕು ಆದರೆ ಈಗ ಆ ಸ್ಥಾನಗಳು ಶೂನ್ಯವಾಗಿ ಕರ್ತವ್ಯ ಲೋಪಗಳಾಗುತ್ತಿವೆ ಎನ್ನಲಾಗಿದೆ.

ಚುನಾಯಿತ ಸರ್ಕಾರ ಸಕ್ರಿಯವಾಗಿ ಕೆಲಸ ಮಾಡದಿದ್ದಾಗ ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕ ಜನರ ಧ್ವನಿಯಾಗಿ ಕೆಲಸ ಮಾಡಬೇಕಾಗುತ್ತದೆ. ಸರಕಾರದಿಂದ ದುರ್ಬಳಕೆ, ದುರಾಚಾರ, ಅಧಿಕಾರ ದುರ್ಬಳಕೆ ಇತ್ಯಾದಿ ಸಂದರ್ಭದಲ್ಲಿ ಪ್ರತಿಪಕ್ಷದ ನಾಯಕ ಧ್ವನಿ ಎತ್ತುವ ಅಧಿಕಾರ ಹೊಂದಿದ್ದಾರೆ. ವಿಪಕ್ಷ ನಾಯಕನನ್ನು ಆಯ್ಕೆ ಮಾಡದೇ ಇರುವ ಮೂಲಕ ಬಿಜೆಪಿಯು ಜನರ ಧ್ವನಿಯಾಗುವಲ್ಲಿ ವಿಫಲವಾಗಿದೆ ಎಂದು ನೋಟಿಸ್‌ನಲ್ಲಿ ದೂರಲಾಗಿದೆ ಎಂದು ವರದಿ ತಿಳಿಸಿದೆ.

See also  ವಾರಾಣಾಸಿಯಲ್ಲಿ ಪ್ರಧಾನಿ ಮೋದಿಗೆ 3ನೇ ಭಾರಿಯ ಗೆಲುವು, 6,12,970 ಮತ ಪಡೆದ ಮೋದಿ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget