ಕರಾವಳಿಸುಳ್ಯ

ಕಡಬ: ಆ್ಯಂಬುಲೆನ್ಸ್‌ನಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ..!,ಉಪ್ಪಿನಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ,ತಾಯಿ -ಮಗು ಆರೋಗ್ಯ

ನ್ಯೂಸ್ ನಾಟೌಟ್ : ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಆ್ಯಂಬುಲೆನ್ಸ್‌ನಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ವರದಿಯಾಗಿದೆ. ಕಡಬ ತಾಲೂಕಿನ ಪೆರಿಯಡ್ಕ ಎಂಬಲ್ಲಿ ಈ ಘಟನೆ ನಡೆದಿದ್ದು,ಅ.17ರಂದು ನಡೆದಿದೆ.

ಶಾಲಿನಿ ಆ್ಯಂಬುಲೆನ್ಸ್‌ನಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ.ಇವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಮಾಹಿತಿ ಪಡೆದ ಆಲಂಕಾರು 108 ಆರೋಗ್ಯ ಕವಚ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು.ಈ ವೇಳೆ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗು ಆರೋಗ್ಯವಾಗಿದ್ದು ಉಪ್ಪಿನಂಗಡಿ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

Related posts

‘ಪುತ್ತೂರಿಗೆ ಪುತ್ತಿಲ’ ಬದಲಾಗಿ ‘ತುಳುನಾಡಿಗೆ ಪುತ್ತಿಲ’ ಹೊಸ ಘೋಷಣೆ ಪ್ರಾರಂಭ! ಸಂಸದ ಅಭ್ಯರ್ಥಿಯಾಗಿ ಪುತ್ತಿಲರನ್ನು ಘೋಷಣೆ ಮಾಡುವಂತೆ ಪ್ರಧಾನಿ ಮೋದಿಗೆ ಪತ್ರ.!

ಕೊಡಗು: ಗಾಂಜಾ ಸರಬರಾಜು ಮಾಡುತ್ತಿದ್ದ ಬೆಡ್ ಶೀಟ್ ಮಾರಾಟಗಾರರು ಅರೆಸ್ಟ್..! ಖಾಸಗಿ ಬಸ್ ನಿಲ್ದಾಣದಲ್ಲಿ ಮಾರಾಟ..!

ದೇವರಕೊಲ್ಲಿ: ಆಲ್ಟೋ ಕಾರು-ಟೆಂಪೊ ಟ್ರಾವೆಲರ್‌ ನಡುವೆ ಅಪಘಾತ; ಪ್ರಯಾಣಿಕರಿಗೆ ಗಾಯ, ವಾಹನ ಜಖಂ