ಕರಾವಳಿಸುಳ್ಯ

ಕಡಬ:ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದು ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಮೃತ್ಯು

ನ್ಯೂಸ್ ನಾಟೌಟ್ : ಚಲಿಸುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ಸಿನಿಂದ ಬಿದ್ದು ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಆಲಂಕಾರು ಎಂಬಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸಿನಿಂದ ಬಿದ್ದು ಮಹಿಳೆ ಗಾಯಗೊಂಡಿದ್ದರು.

ಮೇ.25ರಂದು  ಗೋಳಿತ್ತಡಿ ಶಾರದಾ ನಗರದ ಗುಲಾಬಿ ಎಂಬ ಮಹಿಳೆ ಚಲಿಸುತ್ತಿದ್ದ ಬಸ್ಸಿನಿಂದ ಆಲಂಕಾರು ಎಂಬಲ್ಲಿ ಮಾರ್ಗಕ್ಕೆ ಬಿದ್ದು ತಲೆಗೆ ಗಾಯವಾಗಿತ್ತು. ತಕ್ಷಣ ಅವರಿಗೆ ಸ್ಥಳೀಯ ಕ್ಲಿನಿಕ್ನಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೇ.29ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

Related posts

ಉಡುಪಿ: ಚಲಿಸುತ್ತಿದ್ದ ರೈಲಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ..! ಭಟ್ಕಳದ ನಿವಾಸದಿಂದಲೇ ಆರೋಪಿಯ ಬಂಧನ..!

ಗುತ್ತಿಗಾರು: ಬೈಕ್ ಮತ್ತು ಓಮ್ನಿಕಾರ್ ನಡುವೆ ಭೀಕರ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ

ಸುಳ್ಯ: ಕರ್ತವ್ಯದಲ್ಲಿದ್ದ ಲೈನ್ ಮ್ಯಾನ್ ಗೆ ವಿದ್ಯುತ್ ಶಾಕ್, ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು