ಕಡಬ: ಕಾರ್ ಹಾಗೂ ಬೈಕ್ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಭಾನುವಾರ ರಾತ್ರಿ ಕಡಬದಲ್ಲಿ ನಡೆದಿದೆ. ಕಳಾರ ನಿವಾಸಿ ಅಬ್ದುಲ್ ರಹಿಮಾನ್ ಗಾಯಗೊಂಡವರು. ಕಡಬದಿಂದ ಮರ್ಧಾಳ ಕಡೆಗೆ ತೆರಳುತ್ತಿದ್ದ ಬೈಕ್ ಹಳೇ ಸ್ಟೇಷನ್ ಸಮೀಪ ಎಡಕ್ಕೆ ತಿರುಗುತ್ತಿದ್ದ ಕಾರಿನ ಹಿಂಭಾಗಕ್ಕೆ ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ತಕ್ಷಣವೇ ಸವಾರನನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.