ಕರಾವಳಿ

ಕಡಬ : ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು, ಚಾಲಕನಿಗೆ ಗಾಯ

ಕಡಬ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಚರಂಡಿಗೆ ಬಿದ್ದ ಪರಿಣಾಮ ಚಾಲಕ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ನೀರಾಜೆ ಕ್ರಾಸ್ ಬಳಿ ಬುಧವಾರ ರಾತ್ರಿ ನಡೆದಿದೆ. ಗಾಯಗೊಂಡ ಚಾಲಕನನ್ನು ಕಡಬ ತಾಲೂಕಿನ 102 ನೆಕ್ಕಿಲಾಡಿ ಗ್ರಾಮದ ಡೆಪ್ಪುಣಿ ನಿವಾಸಿ ಕುಶಾಲಪ್ಪ ಎಂದು ಗುರುತಿಸಲಾಗಿದೆ. ಕಡಬದಿಂದ ಮರ್ಧಾಳ ಕಡೆಗೆ ತೆರಳುತ್ತಿದ್ದ ಕಾರು ರಸ್ತೆಯ ಎಡ ಬದಿಗೆ ಬಿದ್ದಿದೆ. ಘಟನೆಯಲ್ಲಿ ಕುಶಾಲಪ್ಪರ ತಲೆಗೆ ಗಾಯಗಳಾಗಿದ್ದು, ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಸಂಪೂರ್ಣ ಜಖಂಗೊಂಡಿದೆ.

Related posts

ಶಮನಗೊಂಡ ಬಿಜೆಪಿ ಭಿನ್ನಮತ: ಮುಂದಿನ ಚುನಾವಣೆಯ ಸಂಘಟನೆಗೆ ಒತ್ತು- ಸುದರ್ಶನ ಮೂಡಬಿದಿರೆ

‘ಕೊರಗಜ್ಜ’ ಹೆಸರಲ್ಲಿ ಸಿನಿಮಾ ಮಾಡಬಾರದು ಎಂದು ತಲ್ವಾರ್ ಹಿಡಿದು ಬೆದರಿಸಿದ್ಯಾರು..? ಈ ಬಗ್ಗೆ ಡೈರೆಕ್ಟರ್ ಹೇಳಿದ್ದೇನು? ನಿರ್ದೇಶಕರಿಗೆ ಸರ್ಕಲ್ ಇನ್ಸ್ ಪೆಕ್ಟರ್ ರಾತ್ರೋರಾತ್ರಿ ಕರೆ ಮಾಡಿದ್ದೇಕೆ?

ತೆಂಗಿನಕಾಯಿ ಕೀಳುತ್ತಿದ್ದ ವೇಳೆ ಎಳನೀರು ತಲೆ ಮೇಲೆ ಬಿದ್ದು ವ್ಯಕ್ತಿ ಮೃತ್ಯು